ಸೋಮವಾರಪೇಟೆ, ಅ. 17: ಸಮೀಪದ ಯಡೂರು ಗ್ರಾಮದ ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗದ ವತಿಯಿಂದ ‘ಇಂಗ್ಲಿಷ್ ಸಾಹಿತ್ಯ ಸಂಘ’ದ ಉದ್ಘಾಟನಾ ಸಮಾರಂಭ ನಡೆಯಿತು.ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಪ್ರೊ. ಶಶಿಕಾಂತ್ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿ, ಯಾವದೇ ಭಾಷೆ ಕಲಿಯುವಾಗ ಎದುರಾಗುವ ಸಮಸ್ಯೆಗಳನ್ನು ಸಂಬಂಧಿಸಿದ ಉಪನ್ಯಾಸಕರೊಂದಿಗೆ ಚರ್ಚಿಸಿದಲ್ಲಿ ಮಾತ್ರ ಆಯಾ ಭಾಷೆಯನ್ನು ಸುಲಭವಾಗಿ ಕಲಿಯಲು ಸಾಧ್ಯ ಎಂದರಲ್ಲದೆ, ಇಂಗ್ಲಿಷ್ ಭಾಷೆಯನ್ನು ಕಲಿಯಬಹುದಾದ ಪರಿಣಾಮಕಾರಿ ವಿಧಾನಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಪ್ರಾಂಶುಪಾಲ ಪ್ರೊ. ಶ್ರೀಧರ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ‘ಇಂಗ್ಲಿಷ್ ಸಾಹಿತ್ಯ ಸಂಘ’ದ ಸಂಚಾಲಕ ಪ್ರೊ. ಎಂ.ಎಸ್. ಶಿವಮೂರ್ತಿ, ಇತಿಹಾಸ ಉಪನ್ಯಾಸಕ ಸುನಿಲ್, ಬಿ.ಟಿ.ಸಿ.ಜಿ. ಪಿ.ಯು. ಕಾಲೇಜಿನ ಉಪನ್ಯಾಸಕ ಮನು ಉಪಸ್ಥಿತರಿದ್ದರು.