ನಾಪೆÇೀಕ್ಲು, ಅ. 17: ರಾಜ್ಯ ಸರಕಾರ, ಶಿಕ್ಷಣ ಇಲಾಖೆ ಬಡ ವಿದ್ಯಾರ್ಥಿಗಳ ಆರ್ಥಿಕ ಮಟ್ಟ ಹೆಚ್ಚಿಸಲು ಮತ್ತು ಅವರ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಉದ್ದೇಶಿಸಿದೆ. ಈ ನಿಟ್ಟಿನಲ್ಲಿ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದು, ನಿರ್ಲಕ್ಷ್ಯ ತೋರುವ ಮುಖ್ಯ ಶಿಕ್ಷಕರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆಯನ್ನು ನೀಡಿದೆ. ಇದರ ಅನ್ವಯ ಶಾಲಾ ಮುಖ್ಯ ಶಿಕ್ಷಕರು ವಿದ್ಯಾರ್ಥಿಗಳ ಪೆÇೀಷಕರಿಗೆ ವಿದ್ಯಾರ್ಥಿಗಳ ಬ್ಯಾಂಕ್ ಖಾತೆ ಪುಸ್ತಕದ ಪ್ರತಿಯೊಂದಿಗೆ ಇತರ ದಾಖಲೆಗಳನ್ನು ನೀಡಬೇಕೆಂದು ಸೂಚಿಸಿದ್ದಾರೆ. ಆದರೆ ತಮ್ಮ ಮಕ್ಕಳ ಹೆಸರಿನಲ್ಲಿ ಖಾತೆ ತೆರೆಯಲು ಬ್ಯಾಂಕ್ಗೆ ತೆರಳುವ ಪೆÇೀಷಕರಿಗೆ ಬ್ಯಾಂಕ್ ಅಧಿಕಾರಿಗಳು, ಸಿಬ್ಬಂದಿ ಸಹಕಾರ ನೀಡದೆ, ಖಾತೆ ತೆರೆಯಲು 15 ರಿಂದ 20 ದಿನಗಳು ಬೇಕಾಗುವದು, ಸಿಬ್ಬಂದಿಗಳಿಲ್ಲ ಎಂದು ಉತ್ತರ ನೀಡುತ್ತಿದ್ದಾರೆ. ಶಾಲೆಗೆ ದಾಖಲಾತಿ ಒದಗಿಸಲು ಸರಕಾರ ನೀಡಿದ ಗಡುವನ್ನು ತಾ. 31 ರವರೆಗೆ ವಿಸ್ತರಿಸಲಾಗಿದೆ. ಆದರೂ ಈ ಅವಧಿಯಲ್ಲಿ ಬ್ಯಾಂಕ್ ಖಾತೆ ತೆರೆಯಲು ಸಾಧ್ಯವಿಲ್ಲದ ಪರಿಸ್ಥಿತಿ ಕಂಡು ಬರುತ್ತಿದೆ. ಬ್ಯಾಂಕ್ನ ಹಿರಿಯ ಅಧಿಕಾರಿಗಳು ಈ ಬಗ್ಗೆ ಸೂಕ್ತ ವ್ಯವಸ್ಥೆ ಮಾಡುವದರ ಮೂಲಕ ತಮ್ಮ ಮಕ್ಕಳ ಮುಂದಿನ ಭವಿಷ್ಯಕ್ಕೆ ನೆರವಾಗಬೇಕೆಂದು ಈ ವ್ಯಾಪ್ತಿಯ ಪೆÇೀಷಕರು ಒತ್ತಾಯಿಸಿದ್ದಾರೆ.