ಶನಿವಾರಸಂತೆ, ಅ. 17: ಶನಿವಾರಸಂತೆ ಹೋಬಳಿಯ ಹಲ್ಲುಕೋಡು ಗ್ರಾಮದ ಕೊಮಾರಯ್ಯ (72) ಅವರು ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಕೊಮಾರಯ್ಯ ಅವರ ಕಿರಿಯ ಮಗ ವಿವಾಹಿತ ಸೋಮಶೇಖರ್ ಕೆಲವು ವರ್ಷಗಳ ಹಿಂದೆ ತೀರಿಕೊಂಡಿದ್ದು, ಇದೇ ಕೊರಗಿನಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಸೋಮವಾರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವಿಷ ಸೇವಿಸಿ ವಾಂತಿ ಮಾಡಿಕೊಳ್ಳುತ್ತಿದ್ದುದನ್ನು ನೋಡಿದ ಮನೆಯವರು. ಶನಿವಾರಸಂತೆ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿ ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾರೆ. ಠಾಣಾಧಿಕಾರಿ ಹೆಚ್.ಎಂ. ಮರಿಸ್ವಾಮಿ ಪ್ರಕರಣ ದಾಖಲಿಸಿದ್ದಾರೆ.