ನಾಪೋಕ್ಲು, ಅ. 17: ಪಾಲೂರು ಗ್ರಾಮದ ಶ್ರೀ ಹರಿಶ್ಚಂದ್ರ ದೇವಾಲಯದಲ್ಲಿ ಧಾರ್ಮಿಕ ವಿಶೇಷ ಪೂಜಾ ಕಾರ್ಯಕ್ರಮ ತಾ. 18 ರಂದು (ಇಂದು) ಜರುಗಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತೀರ್ಥ-ಪ್ರಸಾದ ಸ್ವೀಕರಿಸುವಂತೆ ದೇವಾಲಯದ ಪ್ರಕಟಣೆ ಕೋರಿದೆ. ಪೂಜಾ ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ ಭಕ್ತರಿಗೆ ಅನ್ನದಾನ ಏರ್ಪಡಿಸಲಾಗಿದೆ.