ನಾಪೋಕ್ಲು, ಅ. 17: ಚೆಯ್ಯಂಡಾಣೆಯ ನರಿಯಂದಡ ಗ್ರಾಮಪಂಚಾಯಿತಿಯಲ್ಲಿ ತೆರವಾದ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಳಿಯಂಡ್ರ ರತೀಶ್‍ಕುಮಾರ್ ಶರಣ್ ಅವಿರೋಧವಾಗಿ ಆಯ್ಕೆಯಾದರು. ಮಡಿಕೇರಿ ತಹಶೀಲ್ದಾರ್ ಕುಸುಮ ಚುನಾವಣೆ ಪ್ರಕ್ರಿಯೆಯನ್ನು ನಡೆಸಿದರು.
ನಾಪೋಕ್ಲು ಹೋಬಳಿ ಕಂದಾಯ ಅಧಿಕಾರಿ ರಾಮಯ್ಯ, ಗ್ರಾಮಲೆಕ್ಕಾಧಿಕಾರಿ ಸ್ವಾತಿ, ಠಾಣಾಧಿಕಾರಿ ನಂಜುಂಡ ಸ್ವಾಮಿ ಸಿಬ್ಬಂದಿವರ್ಗ ಹಾಜರಿದ್ದರು. ಪಂಚಾಯಿತಿ ಅಧ್ಯಕ್ಷೆ ಬೇಬಿ ಶಿವಪ್ಪ, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ, ತಾಲೂಕು ಪಂಚಾಯಿತಿ ಸದಸ್ಯೆ ಉಮಾಪ್ರಭು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುನಿತ, ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಉಷಾದೇವಮ್ಮ ಹಾಗೂ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.