ಸಿದ್ದಾಪುರ, ಅ. 17: ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿಡ್ಡಳ್ಳಿಯ ಬಸವನಹಳ್ಳಿ ವಸತಿ ಶಾಲೆಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಲಕ್ಷ್ಮಿಪ್ರೀಯಾ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭ ಆದಿವಾಸಿ ಮುಖಂಡ ಹಾಗೂ ಗ್ರಾ.ಪಂ. ಸದಸ್ಯ ಜೆ.ಕೆ. ಅಪ್ಪಾಜಿ ಮಾತನಾಡಿ, ದಿಡ್ಡಳ್ಳಿ ಚೆನ್ನಂಗಿ ವ್ಯಾಪ್ತಿಯಲ್ಲಿ ನೂರಾರು ಕುಟುಂಬಗಳಿದ್ದು, ಈ ಭಾಗದಲ್ಲಿ ಕಾಡಾನೆಗಳು ಹೆಚ್ಚಾಗಿರುವ ಹಿನ್ನೆಲೆ ದಿಡ್ಡಳ್ಳಿ ಭಾಗದಲ್ಲಿ ಪ್ರೌಢಶಾಲೆಯನ್ನು ಪ್ರಾರಂಭಿಸುವಂತೆ ಮನವಿ ಮಾಡಿಕೊಂಡರು. ಕಾಡಾನೆಗಳ ಹಾವಳಿ ಇರುವ ಹಿನ್ನೆಲೆ ಈ ಭಾಗದ ಶಾಲಾ ಮಕ್ಕಳಿಗೆ ದೂರದ ಊರಿನ ಪ್ರೌಢ ಶಾಲೆಗಳಿಗೆ ತೆರಳಲು ಸಮಸ್ಯೆಯಾಗಿದೆ. ಹಲವಾರು ಮಕ್ಕಳು ಏಳನೇ ತರಗತಿ ನಂತರ ತಮ್ಮ ವಿದ್ಯಾಭ್ಯಾಸವನ್ನು ಮೊಟಕುಗೊಳಿಸು ತ್ತಿರುವದಾಗಿ ಗಮನಕ್ಕೆ ತಂದರು. ಈ ಬಗ್ಗೆ ಪರಿಶೀಲಿಸುವದಾಗಿ ಕಾರ್ಯ ನಿರ್ವಾಹಣಾಧಿಕಾರಿ ತಿಳಿಸಿದರು. ವೀರಾಜಪೇಟೆ ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಜಯಣ್ಣ, ಪಿ.ಡಿ.ಓ.ಗಳಾದ ರಾಜನ್, ಅಬ್ದುಲ್ಲಾ ಹಾಗೂ ಶಿಕ್ಷಕರು ಹಾಜರಿದ್ದರು.