ಕುಶಾಲನಗರ, ಅ. 17: ದೊಡ್ಡಅಳುವಾರದ ವನ್ಯಜೀವಿ ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ವನ್ಯಜೀವಿ ಸಪ್ತಾಹ 2018 ಕಾರ್ಯಕ್ರಮ ಆಚರಿಸಲಾಯಿತು.
ಸಪ್ತಾಹದ ಅಂಗವಾಗಿ ಕುಶಾಲನಗರ ಹೋಬಳಿ ವ್ಯಾಪ್ತಿಯ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಚಿತ್ರಕಲಾ, ಪ್ರಬಂಧ ಸ್ಪರ್ಧೆ ಮತ್ತು ವನ್ಯಜೀವಿ ಛಾಯಚಿತ್ರ ಪ್ರದರ್ಶನವನ್ನು ನಡೆಯಿತು. ಅಬ್ಬೂರು ಕಟ್ಟೆ ವಿಜಯ ಬ್ಯಾಂಕ್ ವ್ಯವಸ್ತಾಪಕ ಎಂ.ವೈ. ರಿಯಾಜ್ ಕಾರ್ಯಕ್ರಮ ಉದ್ಘಾಟಿಸಿದರು.
ಕುಶಾಲನಗರ ಹೋಬಳಿ ವ್ಯಾಪ್ತಿಯ ಸುಮಾರು 15 ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಿಂದ 66 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ನಂತರ ಸಂಸ್ಥೆಯ ನಿರ್ದೇಶಕರಾದ ಡಾ. ಎಂ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕ ಡಾ. ನಾಗರಾಜು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ವನ್ಯಜೀವಿಗಳ ಮಹತ್ವದ ಕುರಿತು ಮಾಹಿತಿ ನೀಡಿದರು.
ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ಸೇರಿದಂತೆ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.