ಶನಿವಾರಸಂತೆ, ಅ. 18: ಇಲ್ಲಿನ ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ಮೊದಲ ಸುತ್ತಿನ ಗ್ರಾಮಸಭೆ ತಾ. 23 ರಂದು ಬೆಳಿಗ್ಗೆ 11 ಗಂಟೆಗೆ ಸಭಾಂಗಣದಲ್ಲಿ ನಡೆಯಲಿದೆ.

ಪಂಚಾಯಿತಿ ಅಧ್ಯಕ್ಷ ಎಂ.ಹೆಚ್. ಮಹಮ್ಮದ್ ಗೌಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಸದಸ್ಯ ಪುಟ್ಟರಾಜ್, ತಾಲೂಕು ಪಂಚಾಯಿತಿ ಸದಸ್ಯ ಬಿ.ಎಸ್. ಅನಂತಕುಮಾರ್ ಹಾಗೂ ನೋಡೆಲ್ ಅಧಿಕಾರಿಯಾಗಿ ಕ್ಷೇತ್ರ ಸಮನ್ವಯ ಅಧಿಕಾರಿ ಪಿ.ಆರ್. ಶಶಿಧರ್ ಪಾಲ್ಗೊಳ್ಳಲಿದ್ದಾರೆ ಎಂದು ಪಿ.ಡಿ.ಓ. ಧನಂಜಯ್ ತಿಳಿಸಿದ್ದಾರೆ.