ಮಡಿಕೇರಿ, ಅ.20: ರಾಜ್ಯ ಸಾರಿಗೆ ಬಸ್‍ವೊಂದನ್ನು ಏರುವಾಗ ಆಯತಪ್ಪಿ ಬಿದ್ದ ವಿದ್ಯಾರ್ಥಿನಿಯೊಬ್ಬರ ಕಾಲಿಗೆ ಹಿಂಬದಿ ಚಕ್ರದಿಂದ ಗಾಯವಾಗಿರುವ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ. ಕುಶಾಲನಗರ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಸಂಧ್ಯಾ ನೀಡಿರುವ ದೂರಿನ ಮೇರೆಗೆ ಪೊಲೀಸರು ಚಾಲಕ ನಂಜುಂಡಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.