ನಾಪೋಕ್ಲು, ಅ. 20: ಸಮೀಪದ ಚೆಯ್ಯಂಡಾಣೆಯ ನರಿಯಂದಡ ಅಯ್ಯಪ್ಪ ಯುವಕ ಸಂಘದ ವತಿಯಿಂದ ಆಯುಧಪೂಜೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಈ ಸಂದರ್ಭ ವಾಹನಗಳನ್ನು ಅಲಂಕರಿಸಿ ಪೂಜಿಸಲಾಯಿತು. ಮೈದಾನದಲ್ಲಿ ವಾಹನಗಳಿಗೆ ಸಾಮೂಹಿಕ ಪೂಜೆ ನಡೆಸಲಾಯಿತು.