ಮಡಿಕೇರಿ, ಅ. 20: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಸ್ಥಾಪನಾ ದಿನವಾದ ವಿಜಯದಶಮಿ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಮಡಿಕೇರಿಯ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ನಡೆಯಿತು. ಪ್ರಮುಖ ಬೀದಿಗಳ ಮೂಲಕ ಘೋಷವಾದ್ಯ ಸಹಿತ ನಡೆದ ಪಥಸಂಚಲದಲ್ಲಿ ಜಿಲ್ಲಾ ಸಂಘ ಚಾಲಕ್ ಚಕ್ಕೇರ ಮನು ಕಾವೇರಪ್ಪ, ಜಿಲ್ಲಾ ಕಾರ್ಯವಾಹ ದಿನೇಶ್ ಕುಮಾರ್ ಹಾಗೂ ಆರ್.ಎಸ್.ಎಸ್.ನ ಸ್ವಯಂ ಸೇವಕರೂ ಸೇರಿದಂತೆ ಪರಿವಾರ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು. ಆ ಮುನ್ನ ಸಂಘ ಕಾರ್ಯಾಲಯ ಮಧುಕೃಪಾ ಬಳಿ ಸಾಮೂಹಿಕ ಪ್ರಾರ್ಥನೆ ನಡೆಯಿತು. ಶ್ರೀ ಓಂಕಾರೇಶ್ವರ ದೇವಾಲಯ ಬಳಿ ಸಮಾಪ್ತಿಗೊಂಡಿತು.