ವೀರಾಜಪೇಟೆ, ಅ. 20: ಭಾರತೀಯ ಜನತಾ ಪಾರ್ಟಿಯ ವೀರಾಜಪೇಟೆ ನಗರ ಸಮಿತಿ ಕಾರ್ಯದರ್ಶಿಯಾಗಿದ್ದ ಟಿ.ಎಂ.ಯೊಗೀಶ್ ನಾಯ್ಡು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಪಕ್ಷದ ಸಾಮಾಜಿಕ ಜಾಲತಾಣದ ತಾಲೂಕು ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಯೋಗೀಶ್ ನಾಯ್ಡು ಅವರಿಗೆ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದಿಂದ ಟಿಕೆಟ್ ಕೊಡದ ಪಕ್ಷದ ನಾಯಕರ ನಿರ್ಧಾರದಿಂದ ರಾಜೀನಾಮೆ ನೀಡುವ ತೀರ್ಮಾನ ಕೈಗೊಂಡಿರುವದಾಗಿ ಯೋಗೀಶ್ ತಿಳಿಸಿದ್ದಾರೆ.