ಮಡಿಕೇರಿ, ಅ.21 : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ವತಿಯಿಂದ ಮಡಿಕೇರಿ ತಾಲೂಕಿನ ಕಾಟಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ’ ಎಂಬ ಧ್ಯೇಯವಾಕ್ಯದೊಂದಿಗೆ ಏರ್ಪಡಿಸಿದ್ದ ಎನ್.ಎಸ್.ಎಸ್.ವಾರ್ಷಿಕ ವಿಶೇಷ ಶಿಬಿರದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ವತಿಯಿಂದ ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನ ಹಾಗೂ ಪವಾಡ ರಹಸ್ಯ ಬಯಲು ಕಾರ್ಯಕ್ರಮ ಏರ್ಪಡಿಸಲಾಗಿತ್ತು.

‘ಯುವ ಜನತೆಯಲ್ಲಿ ವೈಜ್ಞಾನಿಕ ಮಡಿಕೇರಿ, ಅ.21 : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ವತಿಯಿಂದ ಮಡಿಕೇರಿ ತಾಲೂಕಿನ ಕಾಟಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ’ ಎಂಬ ಧ್ಯೇಯವಾಕ್ಯದೊಂದಿಗೆ ಏರ್ಪಡಿಸಿದ್ದ ಎನ್.ಎಸ್.ಎಸ್.ವಾರ್ಷಿಕ ವಿಶೇಷ ಶಿಬಿರದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ವತಿಯಿಂದ ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನ ಹಾಗೂ ಪವಾಡ ರಹಸ್ಯ ಬಯಲು ಕಾರ್ಯಕ್ರಮ ಏರ್ಪಡಿಸಲಾಗಿತ್ತು.

‘ಯುವ ಜನತೆಯಲ್ಲಿ ವೈಜ್ಞಾನಿಕ ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಭಾವವನ್ನು ಮೂಡಿಸಲಾಗುತ್ತಿದೆ ಎಂದರು. ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವನೆ ಬೆಳೆಸಿಕೊಳ್ಳುವ ಮೂಲಕ ವೈಚಾರಿಕ ಚಿಂತನೆ ಬೆಳೆಸಿಕೊಳ್ಳಬೇಕು ಎಂದು ಪ್ರೇಮಕುಮಾರ್ ಹೇಳಿದರು.

‘ಪವಾಡ ರಹಸ್ಯ ಬಯಲು ಕಾರ್ಯಕ್ರಮ’ ನಡೆಸಿಕೊಟ್ಟ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಉಪಾಧ್ಯಕ್ಷರೂ ಆದ ಹೆಬ್ಬಾಲೆ ಪ್ರೌಢಶಾಲೆಯ ಶಿಕ್ಷಕ ಎಂ.ಎನ್.ವೆಂಕಟನಾಯಕ್ ಹಾಗೂ ಸುಳ್ಯ ತಾಲ್ಲೂಕಿನ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಂ.ಕೆ.ನಾಗರಾಜು, ವಿವಿಧ ಪವಾಡಗಳ ಹಿಂದಿರುವ ವೈಜ್ಞಾನಿಕ ಸತ್ಯದ ಪ್ರಾತ್ಯಕ್ಷಿಕೆಗಳನ್ನು ಪ್ರದರ್ಶಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಿ.ಆರ್.ವಿಜಯ್ ಮಾತನಾಡಿ, ಸಮಾಜದಲ್ಲಿ ದೇವಮಾನವರ ಹೆಸರಿನಲ್ಲಿ ಜನರನ್ನು ವಂಚಿಸುತ್ತಿರುವದರ ವಿರುದ್ಧ ವಿದ್ಯಾರ್ಥಿಗಳು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು. ಪವಾಡ ಪುರುಷರೆನಿಸಿಕೊಂಡವರು ವಿವಿಧ ರಾಸಾಯನಿಕ ವಸ್ತುಗಳನ್ನು ಬಳಸಿಕೊಂಡು ತಮ್ಮ ಕೈಚಳಕದಿಂದ ಹೇಗೆ ಪವಾಡ ಮಾಡುತ್ತಾರೆ ಎಂಬುದರ ಕುರಿತು ಮುಖ್ಯ ಶಿಕ್ಷಕ ನಾಗರಾಜು ವಿವರಿಸಿದರು.

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮೂಢನಂಬಿಕೆಗಳ ನಿವಾರಣೆಯಾಗಬೇಕು ಎಂದು ಶಿಕ್ಷಕ ವೆಂಕಟನಾಯಕ್ ತಿಳಿಸಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎ.ಪಿ.ಧನಂಜಯ ವೈಜ್ಞಾನಿಕ ಮನೋವೃತ್ತಿಗೆ ಸಂಬಂಧಿಸಿದ ‘ಏಕೆಂದು ಕೇಳಿ?’ ಎಂಬ ಕರಪತ್ರವನ್ನು ಬಿಡುಗಡೆಗೊಳಿಸಿದರು. ಎಸ್‍ಡಿಎಂಸಿ ಅಧ್ಯಕ್ಷ ಎನ್.ಬಿ.ನಂದಕುಮಾರ್, ಎನ್‍ಎಸ್‍ಎಸ್ ಅಧಿಕಾರಿ ಬಿ.ಡಿ.ರವೀಶ್, ಉಪನ್ಯಾಸಕರಾದ ಸಿದ್ಧರಾಜು, ಅಮೃತ್ ಇದ್ದರು. ಶಿಬಿರಾರ್ಥಿ ರಾಜೇಶ್ವರಿ ಸ್ವಾಗತಿಸಿದರು. ಶಿಬಿರಾರ್ಥಿ ಕೀರ್ತಿ ನಿರ್ವಹಿಸಿದರು. ಶಿಬಿರಾರ್ಥಿ ರವಿ ವಂದಿಸಿದರು.