ಮಡಿಕೇರಿ, ಅ.21 : ಡಾ.ಕಸ್ತೂರಿ ರಂಗನ್ ವರದಿ ಜಾರಿ ಕುರಿತು ನ್ಯಾಯಾಲಯ ಹೊರಡಿಸಿರುವ ಆದೇಶದ ಕುರಿತು ಕೊಡಗು ಜಿಲ್ಲೆಯನ್ನು ನಿರಂತರವಾಗಿ ಪ್ರತಿನಿಧಿಸುತ್ತಾ ಬರುತ್ತಿರುವ ಬಿಜೆಪಿ ಪ್ರತಿನಿಧಿಗಳು ಮೌನ ಮುರಿಯಬೇಕೆಂದು ಸಿಪಿಐಎಂ ಕಾರ್ಯದರ್ಶಿ ಇ.ರಾ. ದುರ್ಗಾಪ್ರಸಾದ್ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೂಕ್ಷ್ಮ ಪರಿಸರ ವಲಯದ ವಿಚಾರದಲ್ಲಿ ಬಿಜೆಪಿ ಮುಖಂಡರು ಕರ್ನಾಟಕ ಸರಕಾರದ ವಿರುದ್ಧ ಆರೋಪ ಮಾಡುವ ಮೊದಲು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಸರಕಾರ ಜನಪರವಾಗಿ ಯಾವ ಮಡಿಕೇರಿ, ಅ.21 : ಡಾ.ಕಸ್ತೂರಿ ರಂಗನ್ ವರದಿ ಜಾರಿ ಕುರಿತು ನ್ಯಾಯಾಲಯ ಹೊರಡಿಸಿರುವ ಆದೇಶದ ಕುರಿತು ಕೊಡಗು ಜಿಲ್ಲೆಯನ್ನು ನಿರಂತರವಾಗಿ ಪ್ರತಿನಿಧಿಸುತ್ತಾ ಬರುತ್ತಿರುವ ಬಿಜೆಪಿ ಪ್ರತಿನಿಧಿಗಳು ಮೌನ ಮುರಿಯಬೇಕೆಂದು ಸಿಪಿಐಎಂ ಕಾರ್ಯದರ್ಶಿ ಇ.ರಾ. ದುರ್ಗಾಪ್ರಸಾದ್ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೂಕ್ಷ್ಮ ಪರಿಸರ ವಲಯದ ವಿಚಾರದಲ್ಲಿ ಬಿಜೆಪಿ ಮುಖಂಡರು ಕರ್ನಾಟಕ ಸರಕಾರದ ವಿರುದ್ಧ ಆರೋಪ ಮಾಡುವ ಮೊದಲು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಸರಕಾರ ಜನಪರವಾಗಿ ಯಾವ ರಾಜ್ಯ ಕಾಂಗ್ರೆಸ್ ಸರಕಾರ ಆಕ್ಷೇಪಣಾ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಿಲ್ಲವೆಂದು ರಾಜ್ಯದ ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಆದರೆ ರಾಜ್ಯ ಸರಕಾರ ತನ್ನ ಜವಾಬ್ದಾರಿಯನ್ನು ನಿಭಾಯಿಸಿರುವದಕ್ಕೆ ಸಾಕ್ಷ್ಯಗಳಿವೆ. ಬಿಜೆಪಿ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವದಕ್ಕಾಗಿ ರಾಜ್ಯ ಸರಕಾರವನ್ನು ಟೀಕಿಸುತ್ತಿದೆ ಎಂದು ಡಾ. ದುರ್ಗಾಪ್ರಸಾದ್ ಆರೋಪಿಸಿದರು.
ಜಿಲ್ಲೆಯನ್ನು ಪ್ರತಿನಿಧಿಸುವ ಸಂಸದರು ಸೇರಿದಂತೆ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬಿಜೆಪಿ ಸಂಸದರು ಕೇಂದ್ರದಲ್ಲಿ ಅಧಿಕಾರದಲ್ಲಿರುವ ತಮ್ಮದೇ ಸರಕಾರದ ಮೇಲೆ ಒತ್ತಡ ಹೇರಿ ಯಾವ ರೀತಿಯಲ್ಲಿ ಜನಪರ ಕಾಳಜಿ ತೋರಿದ್ದಾರೆ ಎಂದು ಅವರು ಪ್ರಶ್ನಿಸಿದರು.
ಡಾ.ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷ ಹಾಗೂ ಶಾಸಕರೂ ಆದ ಎಂ.ಪಿ.ಅಪ್ಪಚ್ಚು ರಂಜನ್ ಮತ್ತು ವಿರಾಜಪೇಟೆ ಶಾಸಕರಾದ ಕೆ.ಜಿ.ಬೋಪಯ್ಯ ಅವರುಗಳು ರಾಜ್ಯ ಸರಕಾರ ಮಂಡಿಸಿದ ಅಭಿಪ್ರಾಯ ಸರಿಯಿಲ್ಲ, ಸಮಿತಿಯ ಮೂಲಕವೇ 10 ಸಾವಿರಕ್ಕೂ ಅಧಿಕ ಆಕ್ಷೇಪಣಾ ಪತ್ರಗಳನ್ನು ಕೇಂದ್ರಕ್ಕೆ ಕಳುಹಿಸಲಾಗುವದೆಂದು ಈ ಹಿಂದೆ ಭರವಸೆ ನೀಡಿದ್ದರು. ಇವರುಗಳು ಭರವಸೆಯಂತೆ ನಡೆದುಕೊಂಡಿದ್ದರೆ ಮತ್ತು ಕೇಂದ್ರದ ಮೇಲೆ ಒತ್ತಡ ಹೇರಿದ್ದರೆ ಸೂಕ್ಷ್ಮ ಪರಿಸರ ವಲಯದ ಕುರಿತು ಮತ್ತೊಂದು ಕರಡು ಅಧಿಸೂಚನೆಯನ್ನು ಕೇಂದ್ರ ಸರಕಾರ ಹೇಗೆ ಹೊರಡಿಸಿತು ಎಂದು ಪ್ರಶ್ನಿಸಿದರು.
ರಾಜ್ಯ ಸರಕಾರ ಈ ಹಿಂದೆಯೇ ಸಲ್ಲಿಸಿದ್ದ ಆಕ್ಷೇಪಣಾ ವರದಿಯನ್ನು ಕೇಂದ್ರ ಸರಕಾರ ಕಡೆಗಣಿಸಿದ್ದು, ಇದನ್ನು ಮರೆ ಮಾಚುವ ಉದ್ದೇಶದಿಂದ ಬಿಜೆಪಿ ಮಂದಿ ಕಾಂಗ್ರೆಸ್ ಸರಕಾರದ ವಿರುದ್ಧ ಟೀಕೆ ಮಾಡುವ ಮೂಲಕ ಜಿಲ್ಲೆಯ ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು. ಪಕ್ಷದ ಪ್ರಮುಖರಾದ ಎ.ಸಿ.ಸಾಬು ಹಾಗೂ ಶಿವಪ್ಪ ಉಪಸ್ಥಿತರಿದ್ದರು.