ಕೂಡಿಗೆ, ಅ. 21: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಯನಗರ ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸೇವಾ ಟ್ರಸ್ಟ್ನ ವತಿಯಿಂದ ನವರಾತ್ರಿ ಉತ್ಸವದ ಅಂಗವಾಗಿ ಗಣಪತಿ ಹೋಮ ಮತ್ತು ದುರ್ಗಾಹೋಮ ನಡೆದವು. ಸುತ್ತಮುತ್ತಲಿನ ನೂರಾರು ಭಕ್ತಾದಿಗಳು ಭಾಗವಹಿಸಿದ್ದರು. ಹೋಮ ನಂತರ ಅನ್ನಸಂತರ್ಪಣೆ ನಡೆಯಿತು. ಕಾವೇರಿ ನದಿಯಿಂದ ಮಹಿಳೆಯರು ಕಲಶದಲ್ಲಿ ತಂದ ನೀರಿನಲ್ಲಿ ದೇವಿಗೆ ಅಭಿಶೇಕ ಮಾಡಲಾಯಿತು. ಈ ಸಂದರ್ಭ ದೇವಸ್ಥಾನದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.