ಮಡಿಕೇರಿ. ಅ.22 : ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ ನೌಕರರಿಗೆ ಸಮಾನ ವೇತನ ಮತ್ತು ಸೇವಾ ಭದ್ರತೆಯನ್ನು ಒದಗಿಸಬೇಕೆಂದು ಒತ್ತಾಯಿಸಿ ರಾಜ್ಯದ ಸುಮಾರು 30 ಸಾವಿರ ಗುತ್ತಿಗೆ ನೌಕರರು ತಾ.25 ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಎಂ.ಮಹದೇವಪ್ಪ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವವರ ಸಂಖ್ಯೆ ಖಾಯಂ ನೌಕರರಿಗಿಂತ ಹೆಚ್ಚಿದೆ. ತಾರತಮ್ಯದಿಂದ ಕೂಡಿದ, ಘನತೆಯಿಲ್ಲದ, ಸೇವಾ ಭದ್ರತೆಯಿಲ್ಲದ ಉದ್ಯೋಗದಿಂದ ಎಲ್ಲರಿಗೂ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡುವದು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.

ಗುತ್ತಿಗೆ ಆಧಾರದ ನೌಕರರಿಗೆ ಅನುಕೂಲ ಆಗಬೇಕು ಎನ್ನುವ ಉದ್ದೇಶಕ್ಕಿಂತ ದೇಶದ ಆರೋಗ್ಯ ವ್ಯವಸ್ಥೆ ಬಲಗೊಳ್ಳಬೇಕು ಎನ್ನುವದಷ್ಟೇ ಪ್ರತಿಭಟನೆಯ ಗುರಿ ಎಂದು ಎಂ.ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ.