ಗೋಣಿಕೊಪ್ಪ ವರದಿ, ಅ. 21: ನಡಿಕೇರಿ ಕಿರಿಯ ಪಾಥಮಿಕ ಶಾಲೆಯಲ್ಲಿ ಏಳು ದಿನಗಳ ಕಾಲ ಕಾವೇರಿ ಪದವಿಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರವನ್ನು ಬಲ್ಯಮುಂಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿಂಡಮಾಡ ಕುಶಿಕುಮಾರ್ ಉದ್ಘಾಟಿಸಿದರು.

ನಡಿಕೇರಿ ಕಿರಿಯ ಪಾಥಮಿಕ ಶಾಲೆ ಸ್ಥಾಪಕ ಶಿಕ್ಷಕ ಕೋಳೇರ ಎಂ. ನಂಜಪ್ಪ ಪಾಲ್ಗೊಂಡು ಮಾತನಾಡಿ, ವಿದ್ಯಾರ್ಥಿಗಳ ಕೊರತೆಯಿಂದ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಬಾರದು. ಒಂದು ವರ್ಗದವರಿಗೆ ಶಿಕ್ಷಣ ನೀಡುತ್ತಾ ಬರುತ್ತಿರುವ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಾಪಾಡಿಕೊಳ್ಳಲು ಗೋಣಿಕೊಪ್ಪ ವರದಿ, ಅ. 21: ನಡಿಕೇರಿ ಕಿರಿಯ ಪಾಥಮಿಕ ಶಾಲೆಯಲ್ಲಿ ಏಳು ದಿನಗಳ ಕಾಲ ಕಾವೇರಿ ಪದವಿಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರವನ್ನು ಬಲ್ಯಮುಂಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿಂಡಮಾಡ ಕುಶಿಕುಮಾರ್ ಉದ್ಘಾಟಿಸಿದರು.

ನಡಿಕೇರಿ ಕಿರಿಯ ಪಾಥಮಿಕ ಶಾಲೆ ಸ್ಥಾಪಕ ಶಿಕ್ಷಕ ಕೋಳೇರ ಎಂ. ನಂಜಪ್ಪ ಪಾಲ್ಗೊಂಡು ಮಾತನಾಡಿ, ವಿದ್ಯಾರ್ಥಿಗಳ ಕೊರತೆಯಿಂದ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಬಾರದು. ಒಂದು ವರ್ಗದವರಿಗೆ ಶಿಕ್ಷಣ ನೀಡುತ್ತಾ ಬರುತ್ತಿರುವ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಾಪಾಡಿಕೊಳ್ಳಲು ಸಮಾಜಕ್ಕೆ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ನಾಯಕತ್ವದ ಬೆಳವಣಿಗೆ ವಿದ್ಯಾರ್ಥಿ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದರು.

ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪೆಮ್ಮಂಡ ಪೊನ್ನಪ್ಪ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಕಡಿಮೆಯಾಗಿದೆ. ಕೊಡವ ಅಕಾಡೆಮಿಯಲ್ಲಿ ಸಾಕಷ್ಟು ಮಾಹಿತಿ ಹೊತ್ತ ಪುಸ್ತಕಗಳಿದ್ದರೂ ಯುವ ಜನತೆ ಓದುವ ಆಸಕ್ತಿ ತೋರುತ್ತಿಲ್ಲ ಎಂದರು.

ಈ ಸಂದರ್ಭ ಪ್ರಾಂಶುಪಾಲ ಎಸ್.ಎಸ್. ಮಾದಯ್ಯ, ಎಸ್‍ಡಿಎಂಸಿ ಅಧ್ಯಕ್ಷೆ ಚೀರಂಡ ಯಶೋಧ, ಬಲ್ಯಮುಂಡೂರು ಗ್ರಾ.ಪಂ. ಸದಸ್ಯ ಕೋಳೇರ ಬೋಪಣ್ಣ, ಚೀರಂಡ ಸ್ವಾತಿ ಮುದ್ದಪ್ಪ, ಗೋಣಿಕೊಪ್ಪ ಪ್ರೆಸ್‍ಕ್ಲಬ್ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ ಉಪಸ್ಥಿತರಿದ್ದರು.

ಯೋಜನಾಧಿಕಾರಿ ತಿರುಮಲ್ಲಯ್ಯ ಎನ್‍ಎಸ್‍ಎಸ್ ಶಿಬಿರದ ಬಗ್ಗೆ ಮಾಹಿತಿ ನೀಡಿದರು. ಶಿಬಿರ ಉಸ್ತುವಾರಿ ಅಧಿಕಾರಿ ಕೆ.ಎಂ. ಕುಸುಮ್ ಹಾಗೂ ಅಕ್ರಂ ನಿರೂಪಿಸಿದರು.