ಮಡಿಕೇರಿ, ಅ.23: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ 2018-19 ತಾ. 25 ಮತ್ತು 26 ರಂದು ವೀರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.

ತಾ. 25 ರಂದು ಬೆಳಿಗ್ಗೆ 10.30 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್, ಶಾಸಕÀ ಕೆ.ಜಿ.ಬೋಪಯ್ಯ, ಜಿ.ಪಂ.ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷÀ ನೆಲ್ಲಚಂಡ ಕಿರಣ್, ಜಿ.ಪಂ. ಸದಸ್ಯರಾದ ಶಶಿ ಸುಬ್ರಮಣಿ, ಅಚ್ಚಪಂಡ ಮಹೇಶ್ ಗಣಪತಿ, ವೀರಾಜಪೇಟೆ ತಾ.ಪಂ. ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ಕೆಂಚಪ್ಪ ಇತರರು ಪಾಲ್ಗೊಳ್ಳಲಿದ್ದಾರೆ. ತಾ. 25 ರಂದು ಬೆಳಿಗ್ಗೆ 6.30 ಗಂಟೆಗೆ ಗುಡ್ಡಗಾಡು ಓಟ ಸ್ಪರ್ಧೆ ನಡೆಯಲಿದೆ.

ತಾ. 26 ರಂದು ಸಂಜೆ 3 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ವೀರಾಜಪೇಟೆ ಸ.ಪ.ಪೂ. ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪಟ್ರಪಂಡ ರಘು ನಾಣಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕÀ ಜಿ.ಕೆಂಚಪ್ಪ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯೆ ಆಶಾ ಸುಬ್ಬಯ್ಯ, ಮನು ಕುಮಾರ್, ಕಾಲೇಜಿನ ಪ್ರಾಂಶುಪಾಲೆ ಎನ್.ಕೆ.ಜ್ಯೋತಿ ಇತರರು ಪಾಲ್ಗೊಳ್ಳಲಿದ್ದಾರೆ.