ಶ್ರೀಮಂಗಲ, ಅ.23 : ತಾವಳಗೇರಿ ಮೂಂದ್ ನಾಡ್ ಕೊಡವ ಸಮಾಜ ಟಿ.ಶೆಟ್ಟಿಗೇರಿ ಸಂಭ್ರಮ ಪೊಮ್ಮಕ್ಕಡ ಕ್ರೀಡೆ ಹಾಗೂ ಸಾಂಸ್ಕøತಿಕ ಸಂಸ್ಥೆ, ಸಾರ್ವಜನಿಕ ಗೌರಿ ಗಣೇಶ ಉತ್ಸವ ಸಮಿತಿ ಹಾಗೂ ಕೊಡವ ತಕ್ಕ್ ಎಳ್ತ್‍ಕಾರಡ ಕೂಟದ ಜಂಟಿ ಆಶ್ರಯದಲ್ಲಿ ಟಿ.ಶೆಟ್ಟಿಗೇರಿ ಕೊಡವ ಸಮಾಜದಲ್ಲಿ ನಡೆಯುತ್ತಿರುವ ಎರಡನೇ ವರ್ಷದ ಕಾವೇರಿ ಚಂಗ್ರಾಂದಿ ಪತ್ತಲೋದಿ ಕಾರ್ಯ ಕ್ರಮವು ಐದು ದಿನಗಳನ್ನು ಪೂರೈಸಿ ಆರನೇ ದಿನಕ್ಕೆ ಕಾಲಿಟ್ಟಿದೆ .

ನಿನ್ನೆ ದಿನ ಗೋಣಿಕೊಪ್ಪದ ಜನನಿ ಪೊಮ್ಮಕ್ಕಡ ಕೂಟದ ಸದಸ್ಯರು ಕೊಡವ ಹಾಡು ನೃತ್ಯವನ್ನೊಳ ಗೊಂಡು ನಡೆಸಿಕೊಟ್ಟ ಕೊಡವ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಕೊಡವ ತೀನಿ ಪಡಿಪು, ಪ್ರದರ್ಶನ ಹಾಗೂ ಮಾರಾಟ ನಡೆಯಿತು.

ಈ ಸಂದರ್ಭ ಮಾತನಾಡಿದ ತಾವಳಗೇರಿ ಮೂಂದ್ ನಾಡ್ ಕೊಡವ ಸಮಾಜದ ಕ್ರೀಡೆ ಹಾಗೂ ಸಾಂಸ್ಕøತಿಕ ಸಮಿತಿ ಅಧ್ಯಕ್ಷ ಕಟ್ಟೇರ ಈಶ್ವರ ಪತ್ತಲೋದಿ ಕಾರ್ಯಕ್ರಮದ ಹತ್ತು ದಿನವೂ ಕ್ರೀಡೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸುವ ಉದ್ದೇಶವಿತ್ತು. ಆದರೆ ಪ್ರಕೃತಿ ವಿಕೋಪದಿಂದ ಜಿಲ್ಲೆಯ ಜನತೆ ಸಂತ್ರಸ್ತರಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ಸಾಂಪ್ರದಾಯಿಕ ಆಚರಣೆಯನ್ನು ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಮಾತ್ರ ಆಚರಿಸುತ್ತಿದ್ದೇವೆ. ಮುಂದಿನ ವರ್ಷ ತಾವಳಗೇರಿ ಮೂಂದ್ ನಾಡ್ ವ್ಯಾಪ್ತಿಗೊಳಪಟ್ಟ ಎಲ್ಲಾ ಗ್ರಾಮಸ್ಥರ ಸಹಕಾರದಿಂದ ವಿಜೃಂಭಣೆಯಿಂದ ಆಚರಿಸಲಾಗುವದು ಎಂದರು.

ನಾಡ್ ತಕ್ಕ ಕೈಬಿಲಿರ ಹರೀಶ್ ಅಪ್ಪಯ್ಯ ಮಾಜಿ ಗ್ರಾ.ಪಂ. ಅಧ್ಯಕ್ಷ ಮಂದಮಾಡ ತೇಜಪ್ಪ ಮಾತನಾಡಿ ದರು. ಕೊಡವ ಸಮಾಜದ ಅಧ್ಯಕ್ಷ ಕೋಟ್ರಮಾಡ ಅರುಣ್ ಅಪ್ಪಣ್ಣ ಸ್ವಾಗತಿಸಿ ವಂದಿಸಿದರು. ಸಾಂಸ್ಕøತಿಕ ಸಂಚಾಲಕ ಚೆಟ್ಟಂಗಡ ರವಿ ಸುಬ್ಬಯ್ಯ ನಿರೂಪಿಸಿದರು. ತಾ. 24 ರಂದು (ಇಂದು) ಸಂಜೆ 5 ಗಂಟೆಗೆ ಬೆಕ್ಕೆಸೊಡ್ಲೂರು ಶ್ರೀಮಂದತ್ತವ್ವ ಟ್ರಸ್ಟ್ ಸದಸ್ಯರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.