ಮಡಿಕೇರಿ, ನ. 5: ಮಡಿಕೇರಿ ನಗರದ ರಾಜಾಸೀಟ್ ಬಳಿ ರಾಜಸೀಟ್ ರಸ್ತೆಯಲ್ಲಿ ನೂತನವಾಗಿ ನಗರಾಭಿವೃದ್ಧಿ ಪ್ರಾಧಿಕಾರದ ಅನುದಾನದಲ್ಲಿ ಎ.ಸಿ.ಚುಮ್ಮಿ ದೇವಯ್ಯ ಅವರ ಅಧ್ಯಕ್ಷತೆಯಲ್ಲಿ ಮಂಜೂರಾದ ಅಲಂಕಾರಿಕ ವಿದ್ಯುತ್ ಕಂಬ ಮತ್ತು ಬೀದಿದೀಪಗಳ ಉದ್ಘಾಟನಾ ಕಾರ್ಯಕ್ರಮವು ತಾ. 6 ರಂದು (ಇಂದು) ಸಂಜೆ 5.30 ಗಂಟೆಗೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಬೋಜೇಗೌಡ, ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ಸಂಸದ ಪ್ರತಾಪ ಸಿಂಹ, ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ. ಪೆನ್ನೇಕರ್, ಇತರರು ಪಾಲ್ಗೊಳ್ಳಲಿದ್ದಾರೆ.