ಸೋಮವಾರಪೇಟೆ,ನ.5: ತಾಲೂಕು ಒಕ್ಕಲಿಗರ ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ, 50ಲಕ್ಷ ರೂ.ಗಳ ವೆಚ್ಚದಲ್ಲಿ ಸುವರ್ಣದ್ವಾರ ಕಟ್ಟಡ ನಿರ್ಮಿಸಲಾಗುವದು ಎಂದು ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಹೇಳಿದರು.

ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಒಕ್ಕಲಿಗ ಕುಲಬಾಂಧವರ ಮಾರ್ಗದರ್ಶನ ಸಭೆಯಲ್ಲಿ ಮಾತನಾಡಿದ ಅವರು, 1968ರಲ್ಲಿ ಪ್ರಾರಂಭವಾದ ಒಕ್ಕಲಿಗರ ಸಂಘ ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಗತಿಯನ್ನು ಸಾಧಿಸುತ್ತಿದೆ. ಮುಂದಿನ ಫೆಬ್ರವರಿ ತಿಂಗಳಲ್ಲಿ ಸುವರ್ಣ ಮಹೋತ್ಸವವನ್ನು ನಡೆಸಲು ತೀರ್ಮಾನಿಸಲಾಗಿದೆ. ಸಮುದಾಯದ ಮಠಗಳ ಹಿರಿಯ ಸ್ವಾಮೀಜಿಗಳ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.

ದಾನಿಗಳಿಗೆ, ಸಮುದಾಯದ ಕ್ರೀಡಾಪಟುಗಳಿಗೆ, ರಾಜಕೀಯ, ಸಾಮಾಜಿಕ ಕ್ಷೇತ್ರಗಳಲ್ಲಿನ ಸಾಧಕರನ್ನು ಸನ್ಮಾನಿಸಲಾಗುವದು. ಅಲ್ಲದೆ ಕ್ರೀಡಾಸ್ಪರ್ಧೆಗಳು ನಡೆಯಲಿದ್ದು, ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವದು ಎಂದು ಹೇಳಿದರು.