ಕೂಡಿಗೆ, ನ. 4: ಪದವಿಪೂರ್ವ ಕಾಲೇಜಿನ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಶಿರಂಗಾಲ ಕಾಲೇಜಿನ ಬಾಲಕರ ವಿಭಾಗದ ಥ್ರೋಬಾಲ್ ತಂಡ, ಬಾಲಕ ಮತ್ತು ಬಾಲಕಿಯರ ಖೋ-ಖೋ ತಂಡಗಳು ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

ಇತ್ತೀಚೆಗೆ ವೀರಾಜಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜಿನ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶಿರಂಗಾಲ ವಿದ್ಯಾರ್ಥಿಗಳು ಪ್ರಥಮ ಸ್ಥಾನಗಳಿಸಿದ್ದಾರೆ. ಮೇಲಾಟಗಳಲ್ಲಿ ಸೋಮಶೇಖರ್ ಎತ್ತರ ಜಿಗಿತ ಪ್ರಥಮ, ಪರಮೇಶ್ ವೇಗದ ನಡಿಗೆ ಸ್ಪರ್ಧೆಯಲ್ಲಿ ದ್ವಿತೀಯ, ಸುದೀಪ್ ಬಾರದ ಗುಂಡು ಎಸೆತ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಹಂಡ್ರಂಗಿ ನಾಗರಾಜ್, ಉಪನ್ಯಾಸರಾದ ವೆಂಕಟೇಶ್, ಕೆ.ಎ. ವೀಣಾ, ಗಣೇಶ್ ಹಾಗೂ ಆಡಳಿತ ಮಂಡಳಿಯವರು ತಿಳಿಸಿದ್ದಾರೆ.