ಕೂಡಿಗೆ, ನ. 5: ತಾ. 2 ರಂದು ‘ಶಕ್ತಿ’ ಪತ್ರಿಕೆಯಲ್ಲಿ ‘ಸದ್ದಿಲ್ಲದೆ ನಡೆಯುತ್ತಿರುವ ಬೃಹತ್ ಕಾಮಗಾರಿ, ಗುಣಮಟ್ಟ ಕಳಪೆ ಆರೋಪ, ತನಿಖೆಗೆ ಆಗ್ರಹ’ ಎಂಬ ಶೀರ್ಷಿಕೆಯಡಿಯಲ್ಲಿ ಪ್ರಕಟಗೊಂಡ ವರದಿಗೆ ಸ್ಪಂದನೆ ದೊರೆತಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ಕಾಮಗಾರಿಯ ಬಗ್ಗೆ ಗಮನಹರಿಸಿದ್ದಾರೆ.

ಜಿಲ್ಲಾಧಿಕಾರಿಗಳು ಈ ಗೋದಾಮು ಕಾಮಗಾರಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ತಿಳಿಸಿದ್ದಾರೆ. ಅಲ್ಲದೆ, ಗೋದಾಮು ಕಾಮಗಾರಿಯ ಬಗ್ಗೆ ಗುತ್ತಿಗೆದಾರ ಸಮಗ್ರ ಮಾಹಿತಿಯನ್ನು ಒದಗಿಸಿದ್ದಲ್ಲಿ ಮುಂದೆ ನಡೆಯುವ ಅಧಿವೇಶನದಲ್ಲಿ ಚರ್ಚಿಸಲಾಗುವದು. ಅಲ್ಲದೆ, ಇನ್ನೆರಡು ದಿನಗಳಲ್ಲಿ ಸ್ಥಳಕ್ಕೆ ತೆರಳಿ ಕಾಮಗಾರಿಯನ್ನು ವೀಕ್ಷಿಸಲಾಗುವದು. ಗುಣಮಟ್ಟವನ್ನು ಕಾಯ್ದುಕೊಳ್ಳದಿದ್ದಲ್ಲಿ ಟೆಂಡರ್‍ದಾರ ಮರು ಕಾಮಗಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವದೆಂದು ಶಾಸಕರು ಸುದ್ದಿಗಾರರಿಗೆ ತಿಳಿಸಿದ್ದಾರೆ.