ಮಡಿಕೇರಿ, ನ. 5: ಕಡಗದಾಳು ಗ್ರಾಮದ ಪ್ರಕೃತಿದತ್ತ ದೇವಾಲಯವಾದ ಶ್ರೀ ಬೊಟ್ಲಪ್ಪೇಶ್ವರ ದೇವಾಲಯದಲ್ಲಿ ಶ್ರೀ ಬೊಟ್ಲಪ್ಪ ಯುವ ಸಂಘ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ತಾ. 8ರಂದು ಕಿರು ಪೂಜೆ ನಡೆಯಲಿದೆ. ಬೆಳಿಗ್ಗೆ 9.30 ರಿಂದ ರುದ್ರಾಭಿಷೇಕ ಹಾಗೂ ವಿವಿಧ ರೀತಿಯ ಪೂಜಾ ಕೈಂಕರ್ಯಗಳು ನಡೆಯಲಿವೆ. ಮಧ್ಯಾಹ್ನ ಸರ್ವರಿಗೂ ಅನ್ನದಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.