ಮಡಿಕೇರಿ, ನ. 5: ರಾಜ್ಯ ಸರ್ಕಾರದ ನಿರ್ದೇಶನದಂತೆ ಟಿಪ್ಪು ಜಯಂತಿ ಆಚರಣೆಗೆ ಕೊಡಗು ಜಿಲ್ಲಾಡಳಿತ ಸಿದ್ಧತೆ ಕೈಗೊಂಡಿದೆ. ಆದ್ದರಿಂದ ಶಾಂತಿಯುತವಾಗಿ ಟಿಪ್ಪು ಜಯಂತಿ ಆಚರಿಸುವ ನಿಟ್ಟಿನಲ್ಲಿ ಸರ್ವರ ಸಹಕಾರ ಅಗತ್ಯ. ಒಂದು ವೇಳೆ ಆಚರಣೆಗೆ ಅಡ್ಡಿಯುಂಟು ಮಾಡಿದರೆ ಕಾನೂನಿನಡಿ ಕ್ರಮ ಕೈಗೊಳ್ಳಲಾಗು ವದೆಂದು ಜಿಲ್ಲಾಧಿಕಾರಿ ಶ್ರೀವಿದ್ಯಾ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿ ಗೋಷ್ಠಿಯಲ್ಲಿ ಅವರು ಮಾತ ನಾಡಿದರು. ತಾ. 10 ರಂದು ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಹಾಗೆಯೇ ವಿರಾಜ ಪೇಟೆಯ ತಾಲ್ಲೂಕು ಕಚೇರಿಯಲ್ಲಿ ಮತ್ತು ಸೋಮವಾರಪೇಟೆಯ ಜೂನಿಯರ್ ಕಾಲೇಜಿನ ಚೆನ್ನಬಸಪ್ಪ ಸಭಾಂಗಣದಲ್ಲಿ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿ ಗೋಷ್ಠಿಯಲ್ಲಿ ಅವರು ಮಾತ ನಾಡಿದರು. ತಾ. 10 ರಂದು ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಹಾಗೆಯೇ ವಿರಾಜ ಪೇಟೆಯ ತಾಲ್ಲೂಕು ಕಚೇರಿಯಲ್ಲಿ ಮತ್ತು ಸೋಮವಾರಪೇಟೆಯ ಜೂನಿಯರ್ ಕಾಲೇಜಿನ ಚೆನ್ನಬಸಪ್ಪ ಸಭಾಂಗಣದಲ್ಲಿ ಮಾತನಾಡಿದರು. ಶಾಂತಿ ಸುವ್ಯವಸ್ಥೆಗೆ ಹೆಸರಾದ ಕೊಡಗು ಜಿಲ್ಲೆಯಲ್ಲಿ ಅಶಾಂತಿ ಉಂಟಾಗಬಾರದು. ಆ ನಿಟ್ಟಿನಲ್ಲಿ ಎಲ್ಲರೂ ಸಹಕರಿಸುವಂತೆ ಅವರು ಮನವಿ ಮಾಡಿದರು.

ಟಿಪ್ಪು ಜಯಂತಿ ಸರ್ಕಾರದ ಮಟ್ಟದಲ್ಲಿ ಆಚರಣೆ ಮಾಡಲಾ ಗುತ್ತಿದ್ದು, ಖಾಸಗಿಯವರು ಪ್ರತ್ಯೇಕವಾಗಿ ಜಯಂತಿ ಆಚರಣೆ ಮಾಡದಂತೆ ತಿಳಿಸಿದರು. ಕಾರ್ಯ ಕ್ರಮದ ಸಂಬಂಧ ಯಾವದೇ ರೀತಿಯ ಫ್ಲೆಕ್ಸ್, ಬ್ಯಾನರ್, ಪೋಸ್ಟರ್‍ಗಳನ್ನು ಬಳಸಲು ಅವಕಾಶವಿಲ್ಲ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪಣ್ಣೇಕರ್ ಮಾತನಾಡಿ ಸರ್ಕಾರದ ನಿರ್ದೇಶ&divound; Àದಂತೆ ಟಿಪ್ಪು ಜಯಂತಿ ಆಚರಿಸ ಲಾಗುತ್ತಿದ್ದು, ಆ ದಿಸೆಯಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಭದ್ರತೆ ಕೊಡುವದು ಪೊಲೀಸ್ ಇಲಾಖೆಯ ಜವಾಬ್ದಾರಿ ಯಾಗಿದೆ. ಆ ದಿಸೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ.

ಜಿಲ್ಲೆಗೆ ಯಾವದೇ ರೀತಿಯ ಕಳಂಕ ಉಂಟಾಗದಂತೆ, ಎಲ್ಲರೂ ಒಟ್ಟಿಗೆ ಸೇರಿ ಶಾಂತಿ ಕಾಪಾಡಲು ಸಹಕರಿಸುವಂತೆ ಪೊಲೀಸ್ ವರಿಷ್ಠಾಧಿಕಾರಿ ಕೋರಿದರು. ಶಾಂತಿ ಸಭೆಯಲ್ಲಿ ಚೇತನ್, ಪ್ರಸನ್ನ ಭಟ್, ವಿನಯ, ಕೆ.ಎಂ.ಗಣೇಶ್, ಮೋಹಿನುದ್ದಿನ್, ಯೂಸುಫ್,

ಟಿ ನರಸಿಂಹ, ಭಾರತೇಶ್ ಇತರರು ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಪ್ರವೀಣ್ ಕುಮಾರ್, ಉಪ ವೀಭಾಗಾಧಿಕಾರಿ ಟಿ.ಜವರೇಗೌಡ, ಡಿವೈಎಸ್‍ಪಿ ಸುಂದರರಾಜ್, ಪೊಲೀಸ್ ವೃತ್ತ ನಿರೀಕ್ಷರಾದ ಅನೂಪ್ ಮಾದಪ್ಪ, ಐ.ಪಿ.ಮೇದಪ್ಪ, ಇತರರು ಇದ್ದರು.

(ಮೊದಲ ಪುಟದಿಂದ)

ಜಿಲ್ಲಾ ಬಿಜೆಪಿ ವಿರೋಧ: ಟಿಪ್ಪು ಜಯಂತಿ ಆಚರಣೆಯನ್ನು ಕೊಡಗು ಜಿಲ್ಲಾ ಬಿಜೆಪಿ ವಿರೋಧಿಸುತ್ತದೆ. ಯಾರಿಗೂ ಬೇಡವಾದ ಟಿಪ್ಪು ಜಯಂತಿಯನ್ನು ಆಚರಿಸಲು ಮುಂದಾಗುವ ಮೂಲಕ ರಾಜ್ಯ ಸರ್ಕಾರ ಮತ ಬ್ಯಾಂಕ್‍ಗಾಗಿ ವ್ಯರ್ಥ ಪ್ರಯತ್ನ ಮಾಡುತ್ತಿದೆ. ಕೊಡಗಿನಲ್ಲಿ ಸಂಘರ್ಷಕ್ಕೆ ಕಾರಣವಾಗಿರುವ ಟಿಪ್ಪು ಜಯಂತಿ ವಿರೋಧಿಸಿ ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಕೈಗೊಂಡಿರುವ ಪ್ರತಿಭಟನೆ ಕೊಡಗು ಜಿಲ್ಲಾ ಬಿಜೆಪಿಯ ಸಂಪೂರ್ಣ ಬೆಂಬಲವಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಭಾರತೀಶ್ ತಿಳಿಸಿದ್ದಾರೆ.