ಮಡಿಕೇರಿ, ನ. 4: ಕೊಡಗು ಜಿಲ್ಲೆಯಲ್ಲಿ ಲಭ್ಯವಿರುವ 37 ಸಾವಿರ ಸಿ ಮತ್ತು ಡಿ ದರ್ಜೆಯ ಜಮೀನನ್ನು ಕಂದಾಯ ಇಲಾಖೆ ತನ್ನ ವಶಕ್ಕೆ ಪಡೆದುಕೊಂಡು ಭೂ ರಹಿತ ಬಡ ಮಂದಿಗೆ ತಲಾ 3 ಏಕರೆಯಂತೆ ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ಭೂಮಿ ಮತ್ತು ವಸತಿ ವಂಚಿತರ ಹಕ್ಕುಗಳ ಹೋರಾಟ ಸಮಿತಿ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸಂಚಾಲಕ ಡಿ.ಎಸ್. ನಿರ್ವಾಣಪ್ಪ ದಿಡ್ಡಳ್ಳಿ ಹೋರಾಟದ ಬಳಿಕ ರಾಜ್ಯದ ಪ್ರಗತಿಪರ ಸಂಘಟನೆಗಳು ಮತ್ತು ದಲಿತ ಸಂಘರ್ಷ ಸಮಿತಿಗಳನ್ನು ಒಳಗೊಂಡಂತೆ ರಚಿಸಲಾದ ಸಮಿತಿ ರಾಜ್ಯದ ಬಡಜನತೆಯ 280 ಬೇಡಿಕೆಗಳು ಹಾಗೂ ಕೊಡಗು ಜಿಲ್ಲೆಯ 38 ಬೇಡಿಕೆಗಳ ಮೂಲಕ ಸರಕಾರದ ಗಮನ ಸೆಳೆದಿತ್ತು. ಸಮಿತಿಯ ಹೋರಾಟದ ಫಲವಾಗಿ ಭೂಮಿಯ ಸಮಸ್ಯೆಗಳಿಗೆ ಹಂತ ಹಂತವಾಗಿ ಪರಿಹಾರ ದೊರೆಯುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಬಡ ವರ್ಗದ ಮಂದಿಗೆ ಭೂಮಿಯನ್ನು ಒದಗಿಸಲು ಆಗ್ರಹಿಸಿ ಇದೇ ತಾ. 12 ರಂದು ರಾಜ್ಯವ್ಯಾಪಿ ಹೋರಾಟ ನಡೆಯಲಿದ್ದು, ಇದರ ಭಾಗವಾಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಿಳಿಸಿದರು.

ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಬ್ಯಾಡಗೊಟ್ಟ, ದಿಡ್ಡಳ್ಳಿ, ಪಾಲೇಮಾಡು, ಚೆರಿಯ ಪರಂಬುವಿನ ಜಾಗದ ಸಮಸ್ಯೆ ಸೇರಿದಂತೆ ಒಟ್ಟು 38 ಸಮಸ್ಯೆಗಳ ಬಗೆಹರಿಕೆಗಾಗಿ ಸರ್ಕಾರದೊಂದಿಗೆ ಪ್ರಯತ್ನಗಳನ್ನು ನಡೆಸುತ್ತಿದೆ. ಸಮಿತಿಯ ಆಗ್ರಹದ ಮೇರೆಗೆ ರಾಜ್ಯದ ಮುಖ್ಯಮಂತ್ರಿಗಳು, ಕಂದಾಯ ಸಚಿವರು, ಕಾರ್ಯದರ್ಶಿಗಳು ಹಾಗೂ ಭೂ ವಂಚಿತರ ಪರವಾದ ಹೋರಾಟಗಾರರನ್ನು ಒಳಗೊಂಡ ಸಮಿತಿಯನ್ನು ರಾಜ್ಯ ಸರ್ಕಾರ ರಚಿಸಿದೆ. ಈ ಸಮಿತಿ ಪ್ರತಿ ಎರಡು ತಿಂಗಳಿಗೊಮ್ಮೆ ಸಭೆ ಸೇರಿ ಭೂ ವಿರೋಧಿಸಿದ ನಿರ್ವಾಣಪ್ಪ, ಇದೀಗ ಕೇವಲ ಅರ್ಧ ಏಕರೆ ಜಾಗಕ್ಕೆ ಹಕ್ಕುಪತ್ರ ನೀಡುವ ಪ್ರಯತ್ನ ನಡೆದಿದೆ. ಆದರೆ, ಸ್ಮಶಾನಕ್ಕಾಗಿ ಮಂಜೂರಾದ ಜಾಗವನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲವೆಂದರು.

ನಮೂನೆ 57 ಜಾರಿ : ವಸತಿ ಮತ್ತು ನಿವೇಶನ ವಂಚಿತರ ಹೋರಾಟ ಸಮಿತಿಯ ಪ್ರಮುಖ ಅಮೀನ್ ಮೊಹಿಸಿನ್ ಮಾತನಾಡಿ, ಜಾಗ ಸಕ್ರಮಕ್ಕಾಗಿ ನಮೂನೆ 50 ಮತ್ತು 53 ರಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೆ ಇರುವವರ ಅನುಕೂಲಕ್ಕಾಗಿ ಇದೀಗ ರಾಜ್ಯ ಸರ್ಕಾರ 2005ರ ಒಳಗೆ ಒತ್ತುವರಿ ಯಾದ ಜಾಗವನ್ನು ಸಕ್ರಮಗೊಳಿಸಲು ನಮೂನೆ 57 ರಲ್ಲಿ ಅರ್ಜಿ ಸಲ್ಲಿಸಲು ಅವಕಾಶವನ್ನು ಒದಗಿಸಿದೆ. 2019ರ ಮಾರ್ಚ್ 16 ವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಮಾಹಿತಿ ನೀಡಿದರು. ಇದು ಸಮಿತಿಯ ಹೋರಾಟಕ್ಕೆ ಸಿಕ್ಕ ಫಲವೆಂದು ಹೆಮ್ಮೆ ವ್ಯಕ್ತಪಡಿಸಿದರು.

ಈ ಹಿಂದೆ ನಮೂನೆ 50 ಮತ್ತು 53 ರಲ್ಲಿ ಸ್ವೀಕರಿಸಿದ ಅರ್ಜಿಗಳಲ್ಲಿ 1.90 ಲಕ್ಷ ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಉಳಿದಿದ್ದು, ಅಕ್ರಮ ಸಕ್ರಮ ಸಮಿತಿಗಳನ್ನು ಘೋಷಣೆÉ ಮಾಡಿ, ಈ ಅರ್ಜಿಗಳನ್ನು ವಿಲೇವಾರಿ ಮಾಡಬೇಕೆಂದು ಒತ್ತಾಯಿಸಿದರು. ಪ್ರ್ರಾಕೃತಿಕ ವಿಕೋಪದಲ್ಲಿ ಸಿಲುಕಿ ಸಂಕಷ್ಟಕ್ಕೆ ಸಿಲುಕಿರುವ 94 ಸಿ ಯಡಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಪರಿಹಾರ ನೀಡದೆ ಸತಾಯಿಸಲಾಗುತ್ತಿದೆ ಎಂದು ಆರೋಪಿಸಿದ ಅಮೀನ್ ಮೊಹಿಸಿನ್ ಮನೆ ಕಳೆದುಕೊಂಡು ಅತಂತ್ರ ಸ್ಥಿತಿಯಲ್ಲಿರುವ ಪ್ರತಿಯೊಬ್ಬರಿಗೂ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಸಮಿತಿಯ ಪ್ರಮುಖ ಹಾಗೂ ಬಹುಜನ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಮೊಣ್ಣಪ್ಪ ಮಾತನಾಡಿ, ಪಾಲೇಮಾಡಿನ ಪರಿಶಿಷ್ಟರಿಗೆ ಮೀಸಲಾದ ಸ್ಮಶಾನ ಜಾಗವನ್ನು ಕ್ರಿಕೆಟ್ ಮಂಡಳಿಗೆ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಇದಕ್ಕೆ ಸಂಬಂಧಿಸಿದಂತೆ ಯಾವದೇ ರಾಜೀ ತೀರ್ಮಾನಕ್ಕೆ ಸಿದ್ಧವಿಲ್ಲವೆಂದು ಸ್ಪಷ್ಟಪಡಿಸಿದರು. ಸ್ಮಶಾನ ಜಾಗವನ್ನು ಮರಳಿ ಪರಿಶಿಷ್ಟರಿಗೆ ನೀಡಲು ಕ್ರಮ ಕೈಗೊಳ್ಳದಿದ್ದಲ್ಲಿ ಮುಂದೆ ಆಗುವ ಯಾವದೇ ಅಹಿತಕರ ಘಟನೆಗಳಿಗೆ ಜಿಲ್ಲಾಡಳಿತವೆ ನೇರ ಹೊಣೆ ಎಂದರು.

ಕಳೆದ ಐದು ದಿನಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆಯುತ್ತಿದ್ದು, ಎರಡು ಎಕರೆ ಸ್ಮಶಾನದ ಜಾಗದ ದಾಖಲೆಯನ್ನು ಕಂದಾಯ ಇಲಾಖೆ ದುರಸ್ತಿಪಡಿಸುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಮೊಣ್ಣಪ್ಪ ಎಚ್ಚರಿಕೆ ನೀಡಿದರು.

ದಸಂಸ ಭೀಮವಾದದ ಸಂಚಾಲಕ ಕೆ.ಬಿ.ರಾಜು ಮಾತನಾಡಿ, ಭೂ ರಹಿತ ದಲಿತರಿಗೆ ಅಗತ್ಯ ಜಾಗವನ್ನು ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಆಡಳಿತ ವ್ಯವಸ್ಥೆಯಲ್ಲಿ ಬಡ ಮಂದಿಯ ಕೆಲಸ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲವೆಂದು ಆರೋಪಿಸಿದರು. ಸ್ಮಶಾನ ಜಾಗವನ್ನು ಕಸಿದುಕೊಳ್ಳಲು ನಡೆಯುತ್ತಿರುವ ಪ್ರಯತ್ನ ದುರ್ಬಲ ವರ್ಗದ ಮೇಲಿನ ದಬ್ಬಾಳಿಕೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರಕ್ರಿಯೆ ನಡೆಯುತ್ತಿರುವದಾಗಿ ಆಕ್ರೋಶ ವ್ಯಕ್ತಪಡಿಸಿದರು.

ಗೋಷ್ಠಿಯಲ್ಲಿ ಸಮಿತಿಯ ಪ್ರಮುಖರಾದ ಮಂಜುನಾಥ್ ಹಾಗೂ ಸಣ್ಣಪ್ಪ ಉಪಸ್ಥಿತರಿದ್ದರು.