ಮಡಿಕೇರಿ, ನ. 7: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ಸರಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಪ್ರತ್ಯೇಕವಾಗಿ ಸಹ ಪಠ್ಯ ಚಟುವಟಿಕೆಯನ್ನು ತಾಲೂಕು ಹಂತದಲ್ಲಿ ತಾ.9 ರಂದು ಜನಪದ ಗೀತೆ, ಆಶುಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಸ್ಥಳದಲ್ಲೇ ಪಾಠೋಪಕರಣ ತಯಾರಿಕೆ, ಸ್ಥಳದಲ್ಲೇ ಚಿತ್ರ ಬರೆಯುವದು, ರಸ ಪ್ರಶ್ನೆ(ಸಾಮಾನ್ಯ ಜ್ಞಾನ), ಹಾಗೂ ರಸ ಪ್ರಶ್ನೆ (ವಿಜ್ಚಾನ) ಒಟ್ಟು 7 ವಿಭಾಗಳಲ್ಲಿ ಸ್ಪರ್ಧೆಗಳು ಮಡಿಕೇರಿ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ)ನಲ್ಲಿ ನಡೆಯಲಿದೆ.
ಈ ಸ್ಪರ್ಧೆಗೆ ಭಾಗವಹಿಸಲು ಇಚ್ಚಿಸುವ ಶಿಕ್ಷಕರು ತಾ. 8 ರಂದು ಎಂ.ಎಚ್. ಹರೀಶ್ (ಶಿಕ್ಷಣ ಸಂಯೋಜಕರು-ಪ್ರೌಢ) (ದೂ: 9980669032) ಇವರಲ್ಲಿ ನೋಂದಣಿ ಮಾಡಿಕೊಳ್ಳುವಂತೆ ತಿಳಿಸಿದೆ. ಒಬ್ಬ ಶಿಕ್ಷಕರು ಒಂದು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಬಹುದು, ಪ್ರಥಮ ಸ್ಥಾನ ಪಡೆದವರು ಜಿಲ್ಲಾ ಹಂತದ ಸ್ಪರ್ಧೆಗೆ ಅರ್ಹರಾಗಿರುತ್ತಾರೆ. ಈಗಾಗಲೇ ನಿಧಿಗಳ ಕಚೇರಿಯಿಂದ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಶಿಕ್ಷಕರು ಪುನ: ಅದೇ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿರುವದಿಲ್ಲ.