ಮಡಿಕೇರಿ, ನ. 9: ಟಿಪ್ಪು ಜಯಂತಿ ಆಚರಣೆಯನ್ನು ರದ್ದು ಪಡಿಸುವಂತೆ ಕೋರಿ ಜಿಲ್ಲೆಯ ಕೆ.ಪಿ. ಮಂಜುನಾಥ್ ಅವರು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ವಿಚಾರಣೆಯನ್ನು ಮತ್ತೆ ಮೂರು ವಾರಗಳ ಅವಧಿಗೆ ಮುಂದೂಡಿದೆ. ವಿಭಾಗೀಯ ಪೀಠದ ನ್ಯಾಯಾಧೀಶರುಗಳಾದ ದಿನೇಶ್ ಮಹೇಶ್ವರಿ ಹಾಗೂ ಸುಜಾತ ಅವರುಗಳು ಈ ಕುರಿತು ಸಂಪೂರ್ಣ ವಿಚಾರಣೆ ನಡೆಯಬೇಕಿದ್ದು, ಮಧ್ಯಂತರ ತಡೆಯಾಜ್ಞೆಯ ಕೋರಿಕೆಯನ್ನು ಪುರಸ್ಕರಿಸಲಿಲ್ಲ.