ಮಡಿಕೇರಿ, ನ. 9: ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಿನಾಚರಣೆಯನ್ನು ಬುಧವಾರ ಆಚರಿಸಲಾಯಿತು.

ನಗರದ ಸಂತ ಜೋಸೆಫರ ಶಾಲೆಯ ಗೈಡ್ಸ್ ವಿದ್ಯಾರ್ಥಿನಿಯರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಧ್ವಜವನ್ನು ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ. ಅವರಿಗೆ ನೀಡುವ ಮೂಲಕ ಧ್ವಜ ದಿನಾಚರಣೆ ಆಚರಿಸಲಾಯಿತು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಪ್ರಧಾನ ಆಯುಕ್ತ ಕೆ.ಬಿ. ಕಾಳಪ್ಪ ದಿನದ ಮಹತ್ವ ಬಗ್ಗೆ ಮಾಹಿತಿ ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಚ್ಚಾಡೋ, ಸ್ಕೌಟ್ಸ್ ಆಯುಕ್ತ ಜಿಮ್ಮಿ ಸೀಕ್ವೆರಾ, ಜಿಲ್ಲಾ ಸಂಘಟಕಿ ದಮಯಂತಿ, ಖಜಾಂಜಿ ಸೋಮಯ್ಯ, ಶಿಕ್ಷಕಿ ಶಾಲಿನಿ ಇತರರು ಇದ್ದರು.