ಕುಶಾಲನಗರ, ನ. 9: ನೋಟ್ ಬ್ಯಾನ್‍ಗೆ ಎರಡು ವರ್ಷ ಸಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವತಿಯಿಂದ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಿತು.

ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ನೇತೃತ್ವದಲ್ಲಿ ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಧಾನಿ ಮೋದಿ ವಿರುದ್ದ ಘೋಷಣೆಗಳನ್ನು ಕೂಗಲಾಯಿತು. ನೋಟು ಅಮಾನ್ಯೀಕರಣಗೊಳಿಸಿ ದೇಶದ ಆರ್ಥಿಕ ವ್ಯವಸ್ಥೆಗೆ ಹಾನಿಗೊಳಿಸಲಾಗಿದೆ ಎಂದು ಆರೋಪಿಸಿ ಧಿಕ್ಕಾರ ಕೂಗಲಾಯಿತು. ನಂತರ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಕೆಲಕಾಲ ರಸ್ತೆ ತಡೆ ನಡೆಸಲಾಯಿತು.

ಪ್ರತಿಭಟನೆ ಸಂದರ್ಭ ಜಿಪಂ ಸದಸ್ಯೆ ಕೆ.ಪಿ.ಚಂದ್ರಕಲಾ, ಕಾಂಗ್ರೆಸ್ ನಗರಾಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಪಪಂ ಸದಸ್ಯರುಗಳಾದ ಖಲೀಮುಲ್ಲಾ, ಪ್ರಮೋದ್ ಮುತ್ತಪ್ಪ, ಪ್ರಮುಖರಾದ ಎಸ್.ಎನ್.ನರಸಿಂಹಮೂರ್ತಿ, ಅಬ್ದುಲ್ ಖಾದರ್, ಹೆಚ್.ಜೆ.ಕರಿಯಪ್ಪ, ಕೆ.ಎನ್.ಅಶೋಕ್ ಮತ್ತಿತರರು ಇದ್ದರು.