ಶ್ರೀಮಂಗಲ, ನ. 10: ಕೊಡಗು ಜಿಲ್ಲೆಯ ವಿವಿಧ ಇಲಾಖೆಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕೊರತೆ ಎದುರಾಗಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುದರೊಂದಿಗೆ ಅಭಿವೃದ್ಧಿ ಕಾರ್ಯಕ್ಕೆ ಹಿನ್ನಡೆಯಾಗಿದೆ ಎಂದು ಜಿ.ಪಂ. ಸದಸ್ಯ ಬಾನಂಡ ಪ್ರಥ್ಯು ತಿಳಿಸಿದ್ದು, ಸಂಬಂಧಿಸಿದ ಇಲಾಖೆಯ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಬೇಕೆಂದು ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಅವರಿಗೆ ಪತ್ರ ಬರೆಯಲಾಗಿದೆ ಎಂದು ಹೇಳಿದ್ದಾರೆ.