ಶ್ರೀಮಂಗಲ, ನ. 10: ವೀರಾಜಪೇಟೆ ತಾಲೂಕು ಕೃಷಿ ಇಲಾಖೆ ವತಿಯಿಂದ ಬಾಳೆಲೆ ಹೋಬಳಿ ಮಟ್ಟದ 2018-19ನೇ ಸಾಲಿನ ಕೃಷಿ ಅಭಿಯಾನ ಕಾರ್ಯಕ್ರಮ ಬಾಳೆಲೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ತಾ. 12ರಂದು ಪೂರ್ವಾಹ್ನ 10.30 ಗಂಟೆಗೆ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಕುಸುಮ ಶೇಖರ್ ವಹಿಸಲಿದ್ದು, ಜಿ.ಪಂ. ಸದಸ್ಯ ಬಾನಂಡ ಪ್ರಥ್ಯು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಜಿ.ಪಂ. ಕೃಷಿ ಸ್ಥಾಯಿ ಸಮಿತಿ ಅಧ್ಯಕ್ಷೆ ಸರೋಜಮ್ಮ ಉಪಸ್ಥಿತರಿರುವರು. ಕೃಷಿ ವಿಜ್ಞಾನಿಗಳೊಂದಿಗೆ ಬಾಳೆಲೆ ಹೋಬಳಿ ವ್ಯಾಪ್ತಿಯ ರೈತರು ಸಂವಾದದಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಕೃಷಿ ಅಧಿಕಾರಿ ಮೀರಾ ಎ.ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.