ಮಡಿಕೇರಿ, ನ. 10: ಜಾನಪದ ಪರಿಷತ್, ಶನಿವಾರಸಂತೆ ಘಟಕ, ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತಾಶ್ರಯದಲ್ಲಿ ತಾ. 12ರಂದು ಸೋಮವಾರಪೇಟೆ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿದೆ. ಕನ್ನಡ ನಾಡು - ನುಡಿ ವಿಷಯದಡಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿಭಾಗಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸ್ಪರ್ಧೆ ನಡೆಯಲಿದ್ದು, ಪ್ರತಿ ತಂಡದಲ್ಲಿ 4 ವಿದ್ಯಾರ್ಥಿಗಳಿಗೆ ಅವಕಾಶವಿದೆ. ಗುರುಕುಲ ಆವರಣದಲ್ಲಿ ಸ್ಪರ್ಧೆ ನಡೆಯಲಿದ್ದು, ಮಧ್ಯಾಹ್ನ ಜಾನಪದ ಪರಿಷತ್‍ನಿಂದ ಲಘು ಭೋಜನದ ವ್ಯವಸ್ಥೆ ಮಾಡಲಾಗಿದೆ. ತಾ. 14ರಂದು ಮಕ್ಕಳ ದಿನಾಚರಣೆ ಸಮಾರಂಭದಲ್ಲಿ ಬಹುಮಾನ ವಿತರಿಸಲಾಗುವದು. ಹೆಚ್ಚಿನ ಮಾಹಿತಿಗೆ ಮೊ. 9141692556 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಗುರುಕುಲದ ಮುಖ್ಯಸ್ಥೆ ಡಿ. ಸುಜಲದೇವಿ ತಿಳಿಸಿದ್ದಾರೆ.