ಮಡಿಕೇರಿ, ನ. 11: ಮಡಿಕೇರಿ ತಾಲೂಕು ಒಕ್ಕಲಿಗರ ಸಂಘದ 5ನೇ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ವಿ.ಜಿ. ಮೋಹನ್ ಅಧ್ಯಕ್ಷತೆಯಲ್ಲಿ ನಗರದಲ್ಲಿ ನಡೆಯಿತು.

ಸಭೆಯಲ್ಲಿ ಸಂಘದ ಅಭಿವೃದ್ಧಿಯ ಕುರಿತು ಚರ್ಚಿಸಲಾಯಿತು. ಅಲ್ಲದೆ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರ ಮತ್ತು ಪ್ರೋತ್ಸಾಹ ಧನವನ್ನು ವಿತರಿಸಲಾಯಿತು. ಸಂಘದ ಕಾರ್ಯ ಚಟುವಟಿಕೆಗಳಿಗೆ ಉಚಿತವಾಗಿ ಸಭಾಂಗಣವನ್ನು ನೀಡುತ್ತಿರುವ ಹಿರಿಯರಾದ ರಾಮರಾಜು, ಡಾ. ನವೀನ್ ಕುಮಾರ್ ಹಾಗೂ ಜಿಲ್ಲಾ ಕಾರ್ಯದರ್ಶಿ ಉಮೇಶ್ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು.

ಮಹಿಳೆಯರಿಗೆ ಹಾಗೂ ಮಕ್ಕಳಿಗೆ ವಿವಿಧ ಕ್ರೀಡೆಗಳನ್ನು ಆಯೋಜಿಸ ಲಾಗಿತ್ತು. ಪ್ರಕೃತಿ ವಿಕೋಪಕ್ಕೆ ತುತ್ತಾದ ಸಂತ್ರಸ್ತರಿಗೆ ಸಂಘದ ವತಿಯಿಂದ ನೆರವು ನೀಡಲಾಯಿತು.

ಸಂಘದ ವಾರ್ಷಿಕ ವರದಿಯನ್ನು ಮತ್ತು ಲೆಕ್ಕ ಪತ್ರವನ್ನು ವಿ.ಎ. ಮಂಜುನಾಥ್ ಮಂಡಿಸಿದರು. ಅಧ್ಯಕ್ಷ ಮೋಹನ್ ಸ್ವಾಗತಿಸಿ, ಸಂಘದ ಕಾರ್ಯ ಸಾಧನೆ ಬಗ್ಗೆ ತಿಳಿಸಿದರು. ಎಸ್.ಎಲ್. ಬಸವರಾಜು ವಂದಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಯು.ಎಂ. ಕುಶಾಲಪ್ಪ, ಉಪಾಧ್ಯಕ್ಷÀ ಬಿ.ಡಿ. ಮಂಜುನಾಥ್, ಆನಂದ, ಮೋಹನ್ ಕುಮಾರ್, ಮಂಜುನಾಥ್, ದಿನೇಶ್, ಉಮೇಶ್, ಲಕ್ಷ್ಮೀಶ್ ಹಾಗೂ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.