ಮಡಿಕೇರಿ, ನ. 11: ಪ್ರವಾಸೋದ್ಯಮ ಇಲಾಖೆಯಿಂದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಮತ್ತು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ವಿದ್ಯಾವಂತ ನಿರುದ್ಯೋಗ ಯುವಕ-ಯವತಿಯರಿಗೆ ಪ್ರವಾಸಿ ಟ್ಯಾಕ್ಸಿ ವಿತರಿಸುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆಯು ತಾ. 16 ರಂದು ಉಪ ವಿಭಾಗಾಧಿಕಾರಿ ಯವರ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.

ಅಂದು ಬೆಳಿಗ್ಗೆ 11 ಗಂಟೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಜಿದಾರರು ಮತ್ತು ಮಧ್ಯಾಹ್ನ 12.30 ಗಂಟೆಗೆ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಅರ್ಜಿದಾರರು ಪ್ರವಾಸಿ ಟ್ಯಾಕ್ಸಿ ಫಲಾನುಭವಿಗಳ ಅರ್ಹತಾ ಪಟ್ಟಿ ಸಿದ್ಧಪಡಿಸುವ ಸಮಿತಿಯ ಮುಂದೆ ಪ್ರವಾಸಿ ಟ್ಯಾಕ್ಸಿ ಪ್ರಕಟಣೆಯಲ್ಲಿ ಸೂಚಿಸಲಾಗಿರುವ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಖುದ್ದಾಗಿ ಹಾಜರಾಗುವಂತೆ ಪ್ರವಾಸೋದ್ಯಮ ಇಲಾಖೆಯ ಕಚೇರಿ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.