ಮಡಿಕೇರಿ, ನ.11 : ನಗರದ ಹೈಟೆಕ್ ಮಾರುಕಟ್ಟೆಯ ಯೋಜನೆ ಪೂರ್ಣಗೊಳ್ಳದೆ ಇರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸಂತೆ ವ್ಯಾಪಾರಿಗಳ ಹಿತರಕ್ಷಣಾ ಸಮಿತಿ ಮುಂದಿನ 15 ದಿನಗಳೊಳಗೆ ಸ್ಥಗಿತಗೊಂಡಿರುವ ಕಾಮಗಾರಿಯನ್ನು ಪುನರ್ ಆರಂಭಿಸದಿದ್ದಲ್ಲಿ ತೀವ್ರ ರೀತಿಯಲ್ಲಿ ಪ್ರತಿಭಟನೆ ನಡೆಸುವದಾಗಿ ಎಚ್ಚರಿಕೆ ನೀಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಎಂ.ಎಂ.ಇಸ್ಮಾಯಿಲ್, ನಾಲ್ಕು ವರ್ಷಗಳ ಹಿಂದೆ ಆರಂಭವಾದ ಮಾರುಕಟ್ಟೆ ಕಾಮಗಾರಿ ಇನ್ನೂ ಕೂಡ ಪೂರ್ಣಗೊಳ್ಳದೆ ಇರುವದರಿಂದ ಮಡಿಕೇರಿ, ನ.11 : ನಗರದ ಹೈಟೆಕ್ ಮಾರುಕಟ್ಟೆಯ ಯೋಜನೆ ಪೂರ್ಣಗೊಳ್ಳದೆ ಇರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸಂತೆ ವ್ಯಾಪಾರಿಗಳ ಹಿತರಕ್ಷಣಾ ಸಮಿತಿ ಮುಂದಿನ 15 ದಿನಗಳೊಳಗೆ ಸ್ಥಗಿತಗೊಂಡಿರುವ ಕಾಮಗಾರಿಯನ್ನು ಪುನರ್ ಆರಂಭಿಸದಿದ್ದಲ್ಲಿ ತೀವ್ರ ರೀತಿಯಲ್ಲಿ ಪ್ರತಿಭಟನೆ ನಡೆಸುವದಾಗಿ ಎಚ್ಚರಿಕೆ ನೀಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಎಂ.ಎಂ.ಇಸ್ಮಾಯಿಲ್, ನಾಲ್ಕು ವರ್ಷಗಳ ಹಿಂದೆ ಆರಂಭವಾದ ಮಾರುಕಟ್ಟೆ ಕಾಮಗಾರಿ ಇನ್ನೂ ಕೂಡ ಪೂರ್ಣಗೊಳ್ಳದೆ ಇರುವದರಿಂದ ಕಾಳಜಿ ತೋರಿಲ್ಲ. ಕಳೆದ ಕೆಲವು ವರ್ಷಗಳಿಂದ ಕಾಮಗಾರಿ ಕುಂಟುತ್ತಾ ಸಾಗಿದ್ದು, ಇದನ್ನು ಚುರುಕುಗೊಳಿಸಿ, ಮಾರುಕಟ್ಟೆಯನ್ನು ಪೂರ್ಣಗೊಳಿಸುವ ಇಚ್ಛಾಶಕ್ತಿ ನಗರಸಭೆಗೆ ಇಲ್ಲ ಎಂದು ಆರೋಪಿಸಿದರು.

ಹಲವಾರು ಬಾರಿ ನಗರಸಭಾ ಅಧ್ಯಕ್ಷರು, ಪೌರಾಯುಕ್ತರಿಗೆ ಮನವಿ ಮಾಡಿಕೊಳ್ಳಲಾಗಿದ್ದರೂ, ಯಾವದೇ ಪ್ರಯೋಜನ ಕಂಡುಬಂದಿಲ್ಲ. ಮುಂದಿನ 15 ದಿನಗಳಲ್ಲಿ ಕಾಮಗಾರಿ ಯನ್ನು ಪುನರಾರಂಭಿಸದಿದ್ದಲ್ಲಿ ಪ್ರತಿಭಟನೆ ನಡೆಸುವದು ಖಚಿತವೆಂದು ತಿಳಿಸಿದರು.

ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ.ಎ.ರಜಾಕ್ ಮಾತನಾಡಿ, ಮಾರುಕಟ್ಟೆ ಸಂಕೀರ್ಣದಲ್ಲಿರುವ ವರ್ತಕರು ತಮ್ಮ ಮಾಸಿಕ ಬಾಡಿಗೆ ಹಣವನ್ನು ನಗರಸಭೆಗೆ ಪಾವತಿಸಲು ತೆರಳಿದ ಸಾಕಷ್ಟು ಸಂದರ್ಭಗಳಲ್ಲಿ ಸಿಬ್ಬಂದಿಗಳಿಲ್ಲದೆ, ಹಿಂದಿರುಗುವ ಸ್ಥಿತಿ ನಿರ್ಮಾಣವಾಗಿದೆ. ಬಾಡಿಗೆ ಪಾವತಿ ಗಾಗಿ ತಮ್ಮ ವ್ಯಾಪಾರ ವಹಿವಾಟನ್ನು ನಿಲ್ಲಿಸಿ, ತೆರಳುವ ಅನಿವಾರ್ಯತೆ ಇದ್ದು, ಪ್ರಸಕ್ತ ಮುಂಗಾರಿನಲ್ಲಿ ಉಂಟಾದ ಪ್ರಾಕೃತಿಕ ವಿಕೋಪಗಳಿಂದ ವ್ಯಾಪಾರ ವಹಿವಾಟು ಕುಂಠಿತಗೊಂಡಿದೆ. ಮಾರುಕಟ್ಟೆ ವರ್ತಕರ ಬಾಡಿಗೆಯನ್ನು ಕನಿಷ್ಠ 3 ತಿಂಗಳ ಅವಧಿಗೆ ಮನ್ನಾ ಮಾಡಬೇಕೆಂದು ರಜಾóಕ್ ಒತ್ತಾಯಿಸಿದರು.

ಮಾರುಕಟ್ಟೆಯ ಮುಂಭಾಗದ ತಿರುವಿನಲ್ಲಿ ಬೃಹದಾಕಾರದ ಗುಂಡಿ ನಿರ್ಮಾಣವಾಗಿದ್ದು, ಮಾರುಕಟ್ಟೆಗೆ ಸಾರ್ವಜನಿಕರು ಹಾಗೂ ವಾಹನಗಳ ಸಂಪರ್ಕವೇ ದುಸ್ತರವಾಗಿದೆ. ತಕ್ಷಣ ಈ ಬಗ್ಗೆ ನಗರಸಭೆ ಗಮನ ಹರಿಸಿ, ದುರಸ್ತಿ ಕಾರ್ಯ ನಡೆಸಬೇಕೆಂದು ಅವರು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಸಮಿತಿಯ ಸಹಕಾರ್ಯದರ್ಶಿ ಎಂ.ಎ. ಮಹಮದಾಲಿ ಹಾಗೂ ಹಿರಿಯ ಸದಸ್ಯ ಎಂ.ಬಿ. ಮಹಮ್ಮದ್ ಶರೀಫ್ ಉಪಸ್ಥಿತರಿದ್ದರು.