ಸೋಮವಾರಪೇಟೆ, ನ. 11: ಇಲ್ಲಿಗೆ ಸಮೀಪದ ಐಗೂರು ಗ್ರಾಮದ ಗುಳಿಗಪ್ಪ ದೇವರ 26ನೇ ವರ್ಷದ ವಾರ್ಷಿಕೋತ್ಸವ ಶ್ರದ್ಧಾ ಭಕ್ತಿಯಿಂದ ನಡೆಯಿತು.

ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ಬೆಳಿಗ್ಗೆಯಿಂದಲೇ ಹಲವು ಪೂಜಾ ಕಾರ್ಯಕ್ರಮಗಳು ನಡೆದವು. ಈ ಸಂದರ್ಭ ದೇವಾಲಯ ಆಡಳಿತ ಮಂಡಳಿಯ ಅಧ್ಯಕ್ಷ ಉಮೇಶ್, ಕಾರ್ಯದರ್ಶಿ ವಿ.ಕೆ. ಕುಮಾರ್ ಸೇರಿದಂತೆ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.