ನಾಪೆÇೀಕ್ಲು, ನ. 11: ಇತ್ತೀಚಿಗೆ ಗೋಣಿಕೊಪ್ಪಲುವಿನಲ್ಲಿ ನಡೆದ ಸಭೆಯಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದವರನ್ನು ಕೂಡಲೇ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಎ. ಮನ್ಸೂರ್ ಅಲಿ ಆಗ್ರಹಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ &divound;ೀಡಿದ ಅವರು, ಪ್ರವಾದಿ ಮಹಮ್ಮದ್ ಪೈಗಂಬರ್ ವಿಶ್ವದ 150 ಕೋಟಿ ಮುಸ್ಲಿಮರ ಆರಾಧ್ಯ ದೈವವಾಗಿದ್ದಾರೆ. ಟಿಪ್ಪು ಸುಲ್ತಾನ್ ಜಯಂತಿ ಹೆಸರಿನಲ್ಲಿ ಅವರನ್ನು ಅಪಮಾನಿಸುವದು ಸರಿಯಾದ ಕ್ರಮವಲ್ಲ. ಅವರಿಗೆ ಮಾಡಿರುವ ಅಪಮಾನ ಇಡೀ ಮುಸ್ಲಿಂ ಜನಾಂಗಕ್ಕೆ ಮಾಡಿರುವ ಅಪಮಾನವಾಗಿದೆ. ಆದುದರಿಂದ ಕೂಡಲೇ ಇಂತಹವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವದರ ಮೂಲಕ ಸಮಾಜದ ಸ್ವಾಸ್ತ್ಯವನ್ನು ಕಾಪಾಡಲು ಜಿಲ್ಲಾಡಳಿತ, ಜಿಲ್ಲಾ ಪೆÇಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಅವರು ಮನವಿ ಮಾಡಿದರು.