ಸಿದ್ದಾಪುರ, ನ. 12: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕ ನೋರ್ವನನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ಸಿದ್ದಾಪುರ ಠಾಣಾ ವ್ಯಾಪ್ತಿಯ ಸಿದ್ದಾಪುರ, ನೆಲ್ಯಹುದಿಕೇರಿ, ಪಾಲಿಬೆಟ್ಟ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಹಾಗೂ ಗಾಂಜಾ ವ್ಯಸನಿಗಳು ಹೆಚ್ಚಾಗುತ್ತಿರುವ ಬಗ್ಗೆ ಇತ್ತೀಚೆಗೆ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿಯ ಗ್ರಾಮ ಸಭೆ ಹಾಗೂ ಸಿದ್ದಾಪುರ ಠಾಣೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಪ್ರಸ್ತಾಪವಾಗಿ, ಪೊಲೀಸರು ಯಾವದೇ ರೀತಿಯ ಕಾನೂನು ಕ್ರಮಕೈಗೊಳ್ಳುತ್ತಿಲ್ಲವೆಂದು ಗಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದರು.ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಪೊಲೀಸರು ಚೆನ್ನಯ್ಯನಕೋಟೆ ಪಾಲಿಬೆಟ್ಟ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರವೀಣ್ (26) ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಿರುದ್ಧ ಪ್ರಕರಣ ದಾಖಲಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ದಯಾನಂದ್, ಸಹಾಯಕ ಠಾಣಾಧಿಕಾರಿ ರಾಜು ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.