ಶ್ರೀಮಂಗಲ, ನ. 12: ಶ್ರೀಮಂಗಲ ಹೋಬಳಿ ಜನಸಂಪರ್ಕ ಸಭೆಯು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅಧ್ಯಕ್ಷತೆಯಲ್ಲಿ ತಾ. 15 ರಂದು ಬೆಳಗ್ಗೆ 10.30 ಗಂಟೆಗೆ ಶ್ರೀಮಂಗಲ ಕೃಷಿ ಪತ್ತಿನ ಸಹಕಾರ ಸಭಾಂಗಣದಲ್ಲಿ ನಡೆಯಲಿದೆ. ಸಾರ್ವಜನಿಕರು ತಮ್ಮ ಆಹವಾಲುಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.