ಮಡಿಕೇರಿ, ನ. 13: ಕೊಡಗು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಜಿಲ್ಲಾ ಯುವ ಒಕ್ಕೂಟ ಹಾಗೂ ಮೂರು ತಾಲೂಕುಗಳ ಯುವ ಒಕ್ಕೂಟ ಮತ್ತು ಪೊನ್ನಂಪೇಟೆಯ ನಿಸರ್ಗ ಯುವತಿ ಮಂಡಳಿ ವತಿಯಿಂದ ಪೊನ್ನಂಪೇಟೆಯಲ್ಲಿ ತಾ. 18 ರಂದು 2018-19ನೇ ಸಾಲಿನ ಕೊಡಗು ಜಿಲ್ಲಾ ಮಟ್ಟದ ಯುವಜನೋತ್ಸವ ನಡೆಯಲಿದೆ.

ಪತ್ರಿಕಾ ಹೇಳಿಕೆ ನೀಡಿರುವ ವೀರಾಜಪೇಟೆ ತಾಲೂಕು ಯುವ ಒಕ್ಕೂಟದ ಅಧ್ಯಕ್ಷೆ ಶೀಲಾ ಬೋಪಣ್ಣ, ಪೊನ್ನಂಪೇಟೆಯ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸ್ಪರ್ಧೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.

ಸ್ಪರ್ಧೆಯ ವಿವರ: ಯುವಕ, ಯುವತಿಯರಿಗಾಗಿ ಜಾನಪದ ನೃತ್ಯ (ಸ್ಪರ್ಧಿಗಳ ಸಂಖ್ಯೆ 20 ಮೀರಬಾರದು), ಜಾನಪದ ಗೀತೆ (ಸ್ಪರ್ಧಿಗಳ ಸಂಖ್ಯೆ 10 ಮೀರಬಾರದು), ಏಕಾಂಕ ನಾಟಕ (ಸ್ಪರ್ಧಿಗಳ ಸಂಖ್ಯೆ 10 ಮೀರಬಾರದು), ಶಾಸ್ತ್ರೀಯ ಗಾಯನ- ಹಿಂದೂಸ್ತಾನಿ ಮತ್ತು ನಾಟಕ ಶೈಲಿ, ಶಾಸ್ತ್ರೀಯ ವಾದನ- ಸಿತಾರ್, ಕೊಳಲು, ತಬಲ, ವೀಣೆ, ಮೃದಂಗ, ಹಾರ್ಮೋನಿಯಂ, ಗಿಟಾರ್, ಶಾಸ್ತ್ರೀಯ ನೃತ್ಯ- ಮಣಿಪುರಿ, ಒಡಿಸ್ಸಿ, ಕಥಕ್, ಕೂಚುಪುಡಿ, ಭರತನಾಟ್ಯ ಹಾಗೂ ಆಶುಭಾಷಣ ಸ್ಪರ್ಧೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ವೀರಾಜಪೇಟೆ ತಾಲೂಕು ಯುವ ಒಕ್ಕೂಟದ ಅಧ್ಯಕ್ಷೆ ಶೀಲಾ ಬೋಪಣ್ಣ - 94807 53610, ಪೊನ್ನಂಪೇಟೆ ನಿಸರ್ಗ ಯುವತಿ ಮಂಡಳಿಯ ಅಧ್ಯಕೆ ರೇಖಾ ಶ್ರೀಧರ್ - 94490 49095, ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಹರೀಶ್ - 94838 35674 ಅವರುಗಳನ್ನು ಸಂಪರ್ಕಿಸ ಬಹುದಾಗಿದೆ.