ಇಂದು ಸ್ವಚ್ಚತಾ ಕಾರ್ಯ
ಶ್ರೀ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯವು ಮಧ್ಯಾಹ್ನ
3 ಗಂಟೆಯ ನಂತರ ನಡೆಯಲಿದ್ದು, ಈ ಸಂದರ್ಭದಲ್ಲಿ ಪ್ರವೇಶ ಇರುವದಿಲ್ಲ. ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಪ್ರಕಟಣೆ ತಿಳಿಸಿದೆ.
ಕಲೋತ್ಸವ ಸ್ಪರ್ಧೆ :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವಶಿಕ್ಷಣ ಅಭಿಯಾನ ಮತ್ತು ಮಾಧ್ಯಮಿಕ ಶಿಕ್ಷಣ ಅಭಿಯಾನದ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಹಾಗೂ ಪದವಿ ಪೂರ್ವ ಕಾಲೇಜು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಬೆಳಿಗ್ಗೆ 9.30 ಗಂಟೆಗೆ ನಗರದ ಸಂತ ಮೈಕಲರ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಎಸ್.ಎಲ್. ಭೋಜೇಗೌಡ, ಆಯನೂರು ಮಂಜುನಾಥ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಸಂಸದ ಪ್ರತಾಪ್ ಸಿಂಹ, ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪಿ, ಜಿ.ಪಂ.ಸಿಇಓ ಕೆ. ಲಕ್ಷ್ಮಿಪ್ರಿಯ, ಜಿ.ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಟಿ.ಕಿರಣ್ ಕಾರ್ಯಪ್ಪ, ಮಡಿಕೇರಿ ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಸಂತ ಮೈಕಲರ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಫಾ. ನವೀನ್ ಕುಮಾರ್ ಇತರರು ಪಾಲ್ಗೊಳ್ಳಲಿದ್ದಾರೆ.
ಜನ ಸಂಪರ್ಕ ಸಭೆ : ಶ್ರೀಮಂಗಲ ಹೋಬಳಿಗೆ ಸಂಬಂಧಿಸಿದಂತೆ ಬೆಳಿಗ್ಗೆ 10 ಗಂಟೆಗೆ ವೀರಾಜಪೇಟೆ ತಾಲೂಕಿನ ಶ್ರೀಮಂಗಲದ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ಕಟ್ಟಡದಲ್ಲಿ ಜಿಲ್ಲಾಧಿಕಾರಿ ಅವರು ಜನ ಸಂಪರ್ಕ ಸಭೆ ನಡೆಸಲಿದ್ದಾರೆ. ಜನಸಂಪರ್ಕ ಸಭೆಗೆ ಸಾರ್ವಜನಿಕರು ಹಾಜರಾಗಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ತಿಳಿಸಿದ್ದಾರೆ.