ಕರಿಕೆ, ನ. 14: ಇಲ್ಲಿನ ಕೃಷಿ ಪತ್ತಿನ ಸಹಕಾರ ಸಂಘಗಳ ಚುನಾವಣೆಯಲ್ಲಿ ಜಯ ಗಳಿಸಿದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ ನೇತೃತ್ವದಲ್ಲಿ ಅಭಿನಂದಿಸಲಾಯಿತು.

ನೂರಾರು ಕಾರ್ಯಕರ್ತ ರೊಂದಿಗೆ ಪಟ್ಟಣದಲ್ಲಿ ನಡೆದ ಮೆರವಣಿಗೆಯಲ್ಲಿ ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮಾನಾಥ್, ಕೆಪಿಸಿಸಿ ಸದಸ್ಯ ಟಿ.ಪಿ. ರಮೇಶ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರಾ ಮೈನಾ, ವಲಯ ಕಾಂಗ್ರೆಸ್ ಅಧ್ಯಕ್ಷ ಬೇಕಲ್ ದೇವರಾಜ್, ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಚಂದ್ರ ನಾಯರ್, ಡಿಸಿಸಿ ಉಪಾಧ್ಯಕ್ಷ ಸುನೀಲ್ ಪತ್ರವೋ, ಸಹಕಾರ ಸಂಘದ ಅಧ್ಯಕ್ಷ ಬೇಕಲ್ ಶರಣ್ ಕುಮಾರ್, ಉಪಾಧ್ಯಕ್ಷೆ ಹೊಸಮನೆ ಮೀನಾಕ್ಷಿ, ಪ್ರಚಾರ ಸಮಿತಿ ಬ್ಲಾಕ್ ಅಧ್ಯಕ್ಷ ಹೊಸೂರು ಸೂರಜ್ ಪೆರಾಜೆ ವಲಯಾಧ್ಯಕ್ಷ ಸುರೇಶ್, ರಾಘವೇಂದ್ರ ಸೇರಿದಂತೆ ಜನಪ್ರತಿನಿಧಿಗಳು, ಕಾರ್ಯಕರ್ತರು ಬಾಗವಹಿಸಿದ್ದರು.