ಮಡಿಕೇರಿ, ನ. 13: ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ ಸಮಾರಂಭ ತಾ. 14 ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ಶಾಲಾ ಆವರಣದಲ್ಲಿ ನಡೆಯಲಿದೆ. ಶಾಲಾ ಅಧ್ಯಕ್ಷ ಕೆ.ಎಸ್. ದೇವಯ್ಯ ಅವರು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಯಂ.ಸಿ. ನಾಣಯ್ಯ ಅವರು ಭಾಗವಹಿಸಲಿದ್ದಾರೆ.