ಮಡಿಕೇರಿ, ನ. 14: ಸೋಮವಾರಪೇಟೆ ತಾಲೂಕು ಸಾರ್ವಜನಿಕ ಶಿಕ್ಷಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹಾಗೂ ಇತರ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ವಿಕಲಚೇತನ ಮಕ್ಕಳ ಉಚಿತ ವೈದ್ಯಕೀಯ ತಪಾಸಣೆ ಮತ್ತು ಮೌಲ್ಯಾಂಕನ ಶಿಬಿರವು ತಾ. 20 ರಂದು ಬೆಳಿಗ್ಗೆ 9.30 ಗಂಟೆಗೆ ಸೋಮವಾರಪೇಟೆಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಚೆನ್ನಬಸಪ್ಪ ಸಭಾಂಗಣದಲ್ಲಿ ನಡೆಯಲಿದೆ ಎಂದು ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಸಿ. ನಾಗರಾಜಯ್ಯ ತಿಳಿಸಿದ್ದಾರೆ.
ಸೋಮವಾರಪೇಟೆ ತಾಲೂಕು ವ್ಯಾಪ್ತಿಯ 1 ರಿಂದ 10ನೇ ತರಗತಿಯವರೆಗಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಎಲ್ಲಾ ಕಿರಿಯ, ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲ ಚೇತನ ಮಕ್ಕಳನ್ನು ಆಯಾಯ ಶಾಲೆಯ ಶಿಕ್ಷಕರು ಹಾಗೂ ಮಕ್ಕಳ ಪೋಷಕರು ಕರೆತಂದು ವೈದ್ಯಕೀಯ ತಪಾಸಣೆ ಮಾಡಿಸಬಹುದು.
ಅಗತ್ಯವುಳ್ಳ ವಿಶೇಷ ಚೇತನ ಮಕ್ಕಳಿಗೆ ಸಾಧನ ಸಲಕರಣೆಗಾಗಿ ಶಿಫಾರಸ್ಸು ಮಾಡಲಾಗುವದು. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮಕ್ಕಳ ಪೋಷಕರು ವಿದ್ಯಾರ್ಥಿಯ ಎರಡು ಭಾವಚಿತ್ರ, ಆಧಾರ್ ಕಾರ್ಡ್ ಜೆರಾಕ್ಸ್ ಮತ್ತು ಪಾಸ್ ಬುಕ್ ಜೆರಾಕ್ಸ್‍ನೊಂದಿಗೆ ಹಾಜರಾಗಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳ ಬಹುದು. ಹೆಚ್ಚಿನ ಮಾಹಿತಿಗೆ ಎಚ್.ಎಸ್. ಕೇಶವಮೂರ್ತಿ ಬಿ.ಐ.ಈ.ಆರ್.ಟಿ. 9902047136, ರತ್ನಮ್ಮ ಬಿ.ಐ.ಇ.ಆರ್.ಟಿ. 9449403078ನ್ನು ಸಂಪರ್ಕಿಸಬಹುದು.