ಮಡಿಕೇರಿ, ನ. 13: ಕೊಡಗು ಜಿಲ್ಲಾ ನ್ಯಾಯಾಂಗ ಇಲಾಖೆ ನೌಕರರ ಸಂಘದ ವತಿಯಿಂದ ಶಿರಸ್ತೇದಾರರಾಗಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸಿದ್ದ ಹೆಚ್.ಎಂ. ಜಯರಾಂ ಅವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ವಿವಿ. ಮಲ್ಲಾಪುರ ಅವರು ಸನ್ಮಾನಿಸಿ, ಗೌರವಿಸಿದರು. ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯಕುಮಾರ್, ಜಿಲ್ಲಾ ನ್ಯಾಯಾಂಗ ಇಲಾಖಾ ನೌಕರರ ಸಂಘದ ಅಧ್ಯಕ್ಷ ಎಸ್.ಟಿ. ಶಮ್ಮಿ, ಟಿ.ಪಿ. ಸದಾಶಿವಪ್ಪ, ಬಿ.ಎಸ್. ಜಯಪ್ಪ, ಕುಶಕುಮಾರ್, ಬಿ.ಕೆ. ರೋಹಿಣಿ, ಕೆ.ಎನ್. ಸುನಂದ, ಒಂದನೇ ಅಪರ ಜಿಲ್ಲಾ ಸತ್ರ ನ್ಯಾಯಾಧೀಶ ಡಿ. ಪವನೇಶ್, ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯಕುಮಾರ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ. ಎಫ್.ಸಿ. ಬಿ.ಕೆ. ಮನು ಮತ್ತು ಹೆಚ್.ಎಂ. ಜಯರಾಂ ಅವರ ಕುಟುಂಬ ವರ್ಗದವರು ಹಾಜರಿದ್ದರು. ಮಾರುತಿ ಪ್ರಾರ್ಥಿಸಿ, ಬಿ.ಕೆ. ರೋಹಿಣಿ ಸ್ವಾಗತಿಸಿ, ಟಿ.ಪಿ. ಸದಾಶಿವಪ್ಪ ವಂದಿಸಿದರು. ಬಿ.ಎಸ್. ಜಯಪ್ಪ ಕಾರ್ಯಕ್ರಮ ನಿರೂಪಿಸಿದರು.