ಮಡಿಕೇರಿ, ನ. 13: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವಶಿಕ್ಷಣ ಅಭಿಯಾನ ಮತ್ತು ಮಾಧ್ಯಮಿಕ ಶಿಕ್ಷಣ ಅಭಿಯಾನ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಹಾಗೂ ಪದವಿ ಪೂರ್ವ ಕಾಲೇಜು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ತಾ. 15 ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಸಂತ ಮೈಕಲರ ಪ್ರೌಢಶಾಲೆಯಲ್ಲಿ ನಡೆಯಲಿದೆ.