ಮಡಿಕೇರಿ, ನ.14 : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ಮಕ್ಕಂದೂರು ಪೌಢಶಾಲೆಯ ಪ್ರಕೃತಿ ವಿಕೋಪದ 63 ನಿರಾಶ್ರಿತ ವಿದ್ಯಾರ್ಥಿಗಳಿಗೆ ಶಬ್ಧಕೋಶ ಪುಸ್ತಕವನ್ನು ವಿತರಿಸಲಾಯಿತು.
ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗಾಳಿಬೀಡಿನ ದಾನಿಗಳು ಹಾಗೂ ಸಮಾಜ ಸೇವಕರಾದ ಟಿ.ಆರ್. ವಾಸುದೇವ್, ಕೆಲವು ತಿಂಗಳುಗಳ ಹಿಂದೆ ಉಂಟಾದ ಪ್ರಕೃತಿ ವಿಕೋಪದಿಂದ ಅಪಾರ ನಷ್ಟ ಉಂಟಾಗಿದ್ದು, ವಿದ್ಯಾರ್ಥಿಗಳು ಕೂಡ ಅತಂತ್ರ ಸ್ಥಿತಿಯಲ್ಲಿದ್ದಾರೆ. ಆದರೆ ದಾನಿಗಳು ವಿದ್ಯಾರ್ಥಿಗಳ ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ಸಹಾಯ ಹಸ್ತ ಚಾಚುವ ಮೂಲಕ ಶೈಕ್ಷಣಿಕ ಪ್ರಗತಿಗೆ ಸಹಕರಿಸುತ್ತಿರುವದು ಶ್ಲಾಘನೀಯ ವೆಂದರು. ವಿದ್ಯಾರ್ಥಿಗಳು ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿ ಕೊಂಡು ಶಾಲೆಗೆ ಹಾಗೂ ಪೋಷಕರಿಗೆ ಒಳ್ಳೆಯ ಹೆಸರು ತರಬೇಕೆಂದು ಸಲಹೆ ನೀಡಿದರು.
ಮುಖ್ಯ ಭಾಷಣಕಾರರಾಗಿ ಮಾತನಾಡಿದ ಲೆಕ್ಕಪರಿಶೋಧಕರಾದ ಟಿ.ಕೆ. ಸುದೀರ್, ವಿದ್ಯಾರ್ಥಿಗಳು ಗುರು, ಹಿರಿಯರಿಗೆ ಗೌರವ ನೀಡುವ ಮನೋಭಾವನೆಯನ್ನು ಬೆಳೆಸಿಕೊಳ್ಳ ಬೇಕು ಎಂದರು.
ವ್ಯಾಂಡಮ್ ಎಂಟರ್ ಪ್ರೈಸಸ್‍ನ ಮಾಲೀಕರಾದ ಕೆ.ಕೆ. ದಾಮೋದರ್ ಮಾತನಾಡಿ, ಸರ್ಕಾರಿ ಶಾಲೆಯ ಶಿಕ್ಷಕರು ಶ್ರಮ ವಹಿಸಿ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡು ತ್ತಿದ್ದು, ಅದನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಕೆನರಾ ಬ್ಯಾಂಕ್‍ನ ನಿವೃತ್ತ ಸಿಬ್ಬಂದಿ ಸಿ.ಎ.ಸುರೇಶ್ ಮಾತನಾಡಿ, ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆ, ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಲಕರಾದ ಹೆಚ್.ಎಲ್. ದಿವಾಕರ್ ಮಾತನಾಡಿ ಸಂಘಟನೆ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಗತ್ಯವಿರುವ ಎಲ್ಲಾ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಿದೆ ಎಂದು ತಿಳಿಸಿದರು.
ಶಾಲೆಯ ಪ್ರಬಾರ ಮುಖ್ಯೋಪಾಧ್ಯಾಯನಿ ಪಿ.ಹರಿಣಾಕ್ಷಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸೇವಾದಳದ ಮುಖ್ಯಸ್ಥರಾದ ಉಮೇಶ್ ಹಾಗೂ ದಸಂಸ ತಾಲೂಕು ಸಂಚಾಲಕ ಎ.ಪಿ. ದೀಪಕ್ ಮೇಕೇರಿ ಉಪಸ್ಥಿತರಿದ್ದರು.