ಒಡೆಯನಪುರ, ನ. 14: ಶನಿವಾರಸಂತೆ ರೋಟರಿ ಕ್ಲಬ್, ಸೋಮವಾರಪೇಟೆ ಪಶುಪಾಲನಾ ಇಲಾಖೆ ಹಾಗೂ ಹಂಡ್ಲಿ ಗ್ರಾ.ಪಂ. ಸಂಯುಕ್ತ ಆಶ್ರಯದಲ್ಲಿ ತಾ. 17 ರಂದು ಗುಡುಗಳಲೆ ಜಾತ್ರಾ ಮೈದಾನದಲ್ಲಿ 2ನೇ ವರ್ಷದ ಸಾಕು ನಾಯಿ ಹಾಗೂ ಬೆಕ್ಕುಗಳಿಗೆ ರೇಬೀಸ್ ಲಸಿಕಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಗುಡುಗಳಲೆ ಜಾತ್ರಾ ಮೈದಾನದಲ್ಲಿ ಹಮ್ಮಿಕೊಂಡಿರುವ ಶಿಬಿರದಲ್ಲಿ ಶನಿವಾರಸಂತೆ ರೋಟರಿ ಕ್ಲಬ್ ಅಧ್ಯಕ್ಷ ಟಿ.ಆರ್. ಪುರುಷೋತ್ತಮ್ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ. ಎ.ಬಿ. ತಮ್ಮಯ್ಯ ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಂಡ್ಲಿ ಗ್ರಾ.ಪಂ. ಅಧ್ಯಕ್ಷ ಸಂದೀಪ್, ಸೋಮವಾರಪೇಟೆ ಪಶು ಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಕೆ. ನಾಗರಾಜ್, ಶನಿವಾರಸಂತೆ ಮಕ್ಕಳ ತಜ್ಞ ಡಾ. ಆರ್.ವಿ. ಚಿದಾನಂದ್ ಮುಂತಾದವರು ಪಾಲ್ಗೊಳ್ಳಲಿದ್ದಾರೆ.