ಮಡಿಕೇರಿ, ನ. 13: ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದ ಕಾರು ಅವಘಡದಲ್ಲಿ ಜಿಲ್ಲೆಯ ಮಹಿಳೆಯೋರ್ವರು ದುರ್ಮರಣಕ್ಕೀಡಾದ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.
ಮೂಲತಃ ಜಿಲ್ಲೆಯ ಬಲ್ಲಮಾವಟಿ ಗ್ರಾಮ ನಿವಾಸಿ, ನುಚ್ಚಿಮಣಿಯಂಡ ಬೆಳ್ಯಪ್ಪ (ಬಾಬ) ಎಂಬವರು ಹರಿಹರದಲ್ಲಿ ಟಾಟಾ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾರೆ. ನಿನ್ನೆ ಮಂಗಳೂರಿನಲ್ಲಿ ಕಾರ್ಯಕ್ರಮವೊಂದಕ್ಕೆ ತೆರಳಿ ಇಂದು ಪತ್ನಿ ಸಹಿತ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಹರಿಹರಕ್ಕೆ ವಾಪಸ್ಸಾಗುತ್ತಿದ್ದಾಗ ಶಿವಮೊಗ್ಗದಲ್ಲಿ ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಕಾರು ಅವಘಡಕ್ಕೀಡಾಗಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನೊಳಗೆ ಸಿಲುಕಿದ ಬೆಳ್ಯಪ್ಪ ಅವರ ಪತ್ನಿ ಸವಿತ (41) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳ್ಯಪ್ಪ ಅವರಿಗೂ ಗಂಭೀರ ಗಾಯಗಳಾಗಿದ್ದು, ಶಿವಮೊಗ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.